News Kannada
Saturday, March 25 2023

ಚಿಕಮಗಳೂರು

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರಿಗೆ ಅಧಿಕಾರ ಹಗಲು ಗನಸು – ಬಿ.ವೈ.ವಿಜಯೇಂದ್ರ

Congress leaders daydream of power: B Y Vijayendra
Photo Credit : News Kannada

ಚಿಕ್ಕಮಗಳೂರು: ಕೇಸರಿ ಎಂದರೆ ತಲೆ ತಿರುಗುವ ನಾಯಕರಿರುವ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು, ಮುಖ್ಯಮಂತ್ರಿ ಆಗಬೇಕು ಎಂದು ಹವಣಿಸುತ್ತಿದೆ. ರಾಜ್ಯದ ಜನರು ಅವರನ್ನು ಕ್ಷಮಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಜಿಲ್ಲಾ ಬಿಜೆಪಿ ವತಿಯಿಂದ ಇಂದು ನಗರದ ಎಐಟಿ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಯುವ ಸಂಗಮ ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಹಗಲುಗನಸು ಕಾಂಗ್ರೆಸ್ ನದ್ದು, ಕಾಂಗ್ರೆಸಿಗರಿಗೆ ನಾವೂ ಹಿಂದೂಗಳು ಎನ್ನುವ ಹೆಮ್ಮೆ ಇದ್ದಿದ್ದರೆ. ತಮ್ಮ ಅಧಿಕಾರದಲ್ಲಿ ೨೫ ರಿಂದ ೩೦ ಹಿಂದೂಗಳ ಹತ್ಯೆಗೆ ಅವಕಾಶ ಕೊಡು ತ್ತಿದ್ದರೆ, ಅಲ್ಪಸಂಖ್ಯಾತ ತುಷ್ಟೀಕರಣದ ಯೋಜನೆಗಳ ಜೊತೆಗೆ ತಮ್ಮದೇ ಪಕ್ಷದ ದಲಿತ ಶಾಸಕರ ಮನೆಗೆ ಬೆಂಕಿ ಹಚ್ಚಿದರೆ ಕಾಪಾಡುವ ಇಚ್ಛೆ ಅವರಿ ಗಿರಲಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಕಾರ್ಯಕರ್ತರೇ ಕೇಸರಿ ಪೇಟ ತೊಡಿಸಲು ಹೋದರೆ ಸಿದ್ದ ರಾಮಯ್ಯ ಕಿತ್ತು ಬಿಸಾಡಿದ್ದಾರೆ. ಕುಂಕುಮವನ್ನು ಹಚ್ಚಿದರೆ ಒರೆಸಿಕೊ ಳ್ಳುತ್ತಾರೆ ಎಂದರು.

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿ ಕಾರಕ್ಕೆ ಬರಬೇಕಿದೆ. ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಬರಬೇಕು. ಇದಕ್ಕಾಗಿ ಕಾರ್ಯಕರ್ತರು ಮುಂಬ ರುವ ಎರಡು ತಿಂಗಳು ಯೋಧರ ರೀತಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.ನಮ್ಮ ಮುಂದಿರುವ ಗುರಿ ಒಂದೇ, ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು. ೨೦೨೪ ರಲೋಕಸಭೆ ಚುನಾವಣೆಯಲ್ಲೂ ೨೫ ಕ್ಷೇತ್ರಗಳನ್ನು ಉಳಿಸಿಕೊಂಡು ನರೇಂ ದ್ರ ಮೋದಿ ಕೈ ಬಲಪಡಿಸಬೇಕಿದೆ ಎಂದರು.

ಈಶಾನ್ಯ ರಾಜ್ಯಗಳ ಚುನಾವಣೆ ಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರು ವುದಲ್ಲದೆ, ಕಾಂಗ್ರೆಸ್‌ನ್ನು ಕಿತ್ತು ಬಿಸಾಕಿದ್ದಾರೆ. ಸ್ವಾತಂತ್ರ್ಯ ಬಂದು ೭೫ ವರ್ಷಗಳಾದರೂ ದೇಶದಲ್ಲಿ ೬ ದಶಕ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ದೇಶದ ಮೇಲೆ ಸವಾರಿ ಮಾಡಿದೆ. ೨೦೦೪ ರಿಂದ ೧೪ ವರೆಗೆ ಕಾಂಗ್ರೆಸ್‌ನ ಯುಪಿಎ ಸರ್ಕಾರ ೧೦ ವರ್ಷ ನಿರಂತರ ಕೆಲಸ ಮಾಡಿದರೂ ದೇಶವ ನ್ನು ಅಭಿವೃದ್ಧಿಪಡಿಸಲಿಲ್ಲ. ಯುವ ಕರ ಕನಸಿಗೆ ಪೂರಕವಾಗಿ ಕೆಲಸ ಮಾಡಲಿಲ್ಲ. ವಿಶ್ವಮಟ್ಟದಲ್ಲಿ ತಲೆ ಎತ್ತಿ ನಡೆಯಲಾಗದ ಸ್ಥಿತಿಗೆ ದೇಶವನ್ನು ತಂದ ಕೀರ್ತಿ ಕಾಂಗ್ರೆಸ್ ಪಕ್ಷದ್ದು ಎಂದು ದೂರಿದರು.

ಅಂದು ಪ್ರಧಾನಿ ಆಗಿದ್ದ ಮನ್ ಮೋಹನ್ ಸಿಂಗ್ ಅವಧಿಯಲ್ಲಿ ೨ಜಿ ಕೋಲ್, ಕಾಮನ್ವೆಲ್ತ್, ಬೋಫೋ ರ್ಸ್ ಹಗರಣಗಳ ಮೇಲೆ ಹಗರಣ ಗಳು ೧೨ ಲಕ್ಷ ಕೋಟಿಗೂ ಹೆಚ್ಚು ಹಗರಣ ನಡೆದ ಕಾರಣ ಜಗತ್ತಿನಲ್ಲಿ ತಲೆ ಎತ್ತದಂತಾಯಿತು. ೨೦೧೪ ರ ವೇಳೆಗೆ ದೇಶಕ್ಕೆ ಭವಿಷ್ಯವೇ ಇಲ್ಲ ಎನ್ನುವ ಸ್ಥಿತಿಗೆ ಬಂದಿತು ಎಂದರು.

ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದಾಗಿ ಹೇಳಿದ್ದಾರೆ. ಯಡಿ ಯೂರಪ್ಪ ಸವಾಲು ಹಾಕಿದರೆ ಅದರ ಪರಿಣಾಮ ಏನಾಗುತ್ತದೆ ಎನ್ನುವುದು ನಮಗಿಂತ ಚೆನ್ನಾಗಿ ವಿರೋಧ ಪಕ್ಷದವರಿಗೆ ಗೊತ್ತಿದೆ. ಹೀಗಾಗಿ ಕುಳಿ ತಲ್ಲಿ, ನಿಂತಲ್ಲಿ ಯಡಿಯೂರಪ್ಪ ಅವರ ಹೆಸರನ್ನು ಜಪ ಮಾಡುತ್ತಿದ್ದಾರೆ ಎಂದರು.

See also  ಮಂಗಳೂರು: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋ ಟ್ಯಾನ್, ರಾಜ್ಯಾಧ್ಯಕ್ಷ ಡಾ.ಸಂದೀಪ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಡಿ.ಕಲ್ಮ ರುಡಪ್ಪ, ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ, ನಗರ ಸಭೆ ಅಧ್ಯಕ್ಷ ವರಸಿದ್ದಿ ವೇಣುಗೋ ಪಾಲ್, ನಗರ ಬಿಜೆಪಿ ಅಧ್ಯಕ್ಷ ಮಧು ಕುಮಾರ್ ಅರಸ್, ಗ್ರಾಮಾಂತರ ಅಧ್ಯಕ್ಷ ಈಶ್ವರಳ್ಳಿ ಮಹೇಶ್, ಸಿಡಿಎ ಅಧ್ಯಕ್ಷ ಸಿ.ಆನಂದ್ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು