ಚಿಕಮಗಳೂರು: ಬಿಜೆಪಿಯವರು ತೋರಿಸುವ ಆಸೆ ಆಕಾಂಕ್ಷೆಗಳಿಗೆ ಒಳಗಾಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್‌ಪಿ ಮಂಜೇಗೌಡ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡಿದರು.
ಅವರು ಇಂದು ಹಂಪಾಪುರ ಗ್ರಾಮ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳನ್ನು ವಿತರಿಸಿದರು. ಗ್ರಾಮದ ಮನೆಮನೆಗಳಿಗೆ ತೆರಳಿದ ಅವರು ಬಿಜೆಪಿ ಆಡಳಿತದಲ್ಲಿ ಮತದಾರರಿಗೆ ಆಗಿರುವ ಅನ್ಯಾಯದ ಬಗ್ಗೆ ತಿಳಿಸಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಸಾಮಾನ್ಯ ಜನರು ಬದುಕಲು ಸಾಧ್ಯವಾಗುತ್ತದೆ ಎಂದರು.
ಬಿಜೆಪಿ ಆಡಳಿತದಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಮಹಿಳೆಯರ ಕೈ ಬಲಪಡಿಸಲು ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಪ್ರತಿ ತಿಂಗಳಿಗೆ ಜಿಎಸ್‌ಟಿ ಪರಿಹಾರಕ್ಕೆ 500 ರೂಪಾಯಿ, ಗ್ಯಾಸ್ ಸಿಲಿಂಡರ್ ಗೆ 500 ಹಾಗೂ ಬೆಲೆ ಏರಿಕೆಯ ಪರಿಹಾರಕ್ಕೆ ಒಂದು ಸಾವಿರ ರೂಪಾಯಿ ಸೇರಿದಂತೆ ಒಟ್ಟು 2 ಸಾವಿರ ರೂಪಾಯಿಗಳನ್ನು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತವಾಗಿ ನೀಡಲಿದೆ ಎಂದರು. ಅಲ್ಲದೆ ಪ್ರತಿ ಮನೆಗೂ ಪ್ರತಿ ತಿಂಗಳು ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಿದೆ. ಹಾಗೂ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. ಈ ಮೂರು ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನೀಡಲಾಗುತ್ತದೆ ಎಂದರು.
ಸದೃಢ ಹಾಗೂ ಸುರಕ್ಷಿತ ಕುಟುಂಬಕ್ಕಾಗಿ ಈ ಬಾರಿ ಕಾಂಗ್ರೆಸ್ ಗೆ ಎಲ್ಲರೂ ಮತ ಚಲಾಯಿಸಬೇಕೆಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಹೋಬಳಿ ಅಧ್ಯಕ್ಷರಾದ ನಾಗಭೂಷಣ್, ಭೂತ್ ಅಧ್ಯಕ್ಷರಾದ ಚಂದ್ರೇಗೌಡ, ಮುಖಂಡರಾದ ರಾಜು, ಜಯಣ್ಣ, ಲಕ್ಷ್ಮಣ್, ಮಹೇಶ್ ಇನ್ನಿತರರು ಉಪಸ್ಥಿತರಿದ್ದರು.