News Karnataka Kannada
Friday, April 19 2024
Cricket
ಚಿಕಮಗಳೂರು

ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Ullal: Man commits suicide by pouring petrol
Photo Credit : News Kannada

ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ಯುವಕ ವರುಣ್ ಎಂದು ಗುರುತಿಸಲಾಗಿದೆ.

ತರೀಕೆರೆ ಶಾಸಕ ಶ್ರೀನಿವಾಸ್‌ ಅವರಿಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆದಿದೆ.

ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ, ವರುಣ್‌ಗೆ ಡ್ರ್ಯಾಗರ್ ಹಾಕಿದ್ದಾನೆ. ವರುಣ್‌ ಹೊಟ್ಟೆ ಹಾಗೂ ಪಕ್ಕಕೆಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಶಿವಮೊಗ್ಗಕ್ಕೆ ಕೊಂಡೊಯ್ದರು ವರುಣ್ ಸಾವನ್ನಪ್ಪಿದ್ದಾನೆ. ಮಂಜು ಹಾಗೂ ಸಂಜು ಕೈ ಹಾಗೂ ಕಾಲಿಗೆ ಚಾಕು ಇರಿತವಾಗಿದೆ. ಸ್ಥಳಕ್ಕೆ ಎಸ್‌.ಪಿ.ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು