News Kannada
Wednesday, February 01 2023

ಶಿವಮೊಗ್ಗ

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ; ಹಾನಿ ಪರಿಶೀಲನೆ

Photo Credit :
ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಅತಿವೃಷ್ಟಿಯಿಂದ ಹಾನಿಗೀಡಾಗಿರುವ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಪ್ರದೇಶಗಳಿಗೆ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಹಾನಿಗೀಡಾದ ಕೃಷಿ ಭೂಮಿ, ಮನೆಗಳು,  ಪ್ರಾಣ ಹಾನಿ, ಜಾನುವಾರು ಹಾನಿ ಸೇರಿದಂತೆ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು. ಸರಕಾರದ ಮಾರ್ಗಸೂಚಿ ಹೊರತುಪಡಿಸಿ ಹೆಚ್ಚುವರಿ ಪರಿಹಾರ ಒದಗಿಸುವ ಕುರಿತು ಪ್ರಯತ್ನಿಸಲಾಗುವುದು ಎಂದರು.

ಅತಿವೃಷ್ಟಿ ನಷ್ಟ ಪರಿಹಾರ ಸಮೀಕ್ಷೆ ನಾಲ್ಕು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ವರದಿ ಕೈ ಸೇರಿದ ಬಳಿಕ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚುವ ಅರಗ ಜ್ಞಾನೇಂದ್ರ ತಿಳಿಸಿದರು.
ಸಚಿವರು ಗುಡ್ಡ ಕುಸಿತದಿಂದ ಹಾನಿಗೀಡಾದ ಕೂಡಿಗೆ ಮಜಿರೆಯ ಹೆಗ್ಗಾರು ಬೆಟ್ಟ, ಭಾರತಿಪುರ ಬಳಿಯ ಹೆದ್ದಾರಿ ಕುಸಿತ, ಎಡೆಹಳ್ಳಿ ಕೆರೆ ಬಳಿಯ ಗುಡ್ಡ ಕುಸಿತ ಸ್ಥಳ, ಯೋಗಿ ನರಸೀಪುರ ಬಳಿಯ ಹುಲಿಬೆಟ್ಟ ಗುಡ್ಡ ಕುಸಿತ ಹಾಗೂ ಗೇರುವಳ್ಳಿ ಬಳಿ ರಸ್ತೆ ಕುಸಿದ ಸ್ಥಳ ಪರಿಶೀಲನೆ ನಡೆಸಿದರು.
ಒಂದೇ ದಿನ ಸುರಿದ ಭಾರೀ ಮಳೆಗೆ ತಾಲೂಕಿನಲ್ಲಿ 10ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿದಿದೆ. ಹಲವು ಕೆರೆಗಳ ಕೋಡಿ ಹರಿದು ಕೃಷಿ ಜಮೀನುಗಳಿಗೆ ಹಾನಿ ಸಂಭವಿಸಿದೆ. ಗ್ರಾಮೀಣ ರಸ್ತೆಗಳು ಹಾನಿಗೀಡಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿ ಅಂದಾಜು ನಡೆಸುತ್ತಿದ್ದಾರೆ ಎಂದು ಅರಗ ಜ್ಞಾನೇಂದ್ರ ಅವರು ತಿಳಿಸಿದರು.
See also  ನಕಲಿ ವೈದ್ಯನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು