News Kannada
Monday, October 03 2022

ಶಿವಮೊಗ್ಗ

ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಸರಳವಾಗಿ ಆಚರಿಸಲಾಗುವುದು : ಕೆ.ಎಸ್.ಈಶ್ವರಪ್ಪ - 1 min read

Photo Credit :

ಶಿವಮೊಗ್ಗ : ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ಪಾಲಿಕೆ ಸದಸ್ಯರ ಮತ್ತು ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಮೈಸೂರು ದಸರಾ ಮಾದರಿಯಲ್ಲಿ ಹಲವು ವರ್ಷಗಳಿಂದ ದಸರಾವನ್ನು ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಗಿದ್ದು, ಈ ಬಾರಿ ಹೆಚ್ಚಿನ ಜನ ಸೇರದಂತೆ ಎಲ್ಲಾ ಮುಂಜಾಗ್ರತೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳನ್ನು ಮಾಡಲಾಗಿದೆ.

9ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಹಿಂದೆ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ಈ ಬಾರಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

ವಿಜಯದಶಮಿಯ ಕಡೆ ದಿನದ ಮೆರವಣಿಗೆಯನ್ನು ಸರಳವಾಗಿ, ವ್ಯವಸ್ಥಿತವಾಗಿ ನಡೆಸಲಾಗುವುದು. ಪ್ರತಿ ವರ್ಷ ನೀಡುವಂತೆ 196 ದೇವಾಲಯಗಳಿಗೆ ಪೂಜೆ ಆಲಂಕಾರಕ್ಕಾಗಿ 4ಸಾವಿರ ರೂ. ಅನುದಾನ ಒದಗಿಸಲಾಗುವುದು. ಆದರೆ ಮೆರವಣಿಗೆಯಲ್ಲಿ ಎಲ್ಲಾ ದೇವಾಲಯಗಳು ಭಾಗವಹಿಸುವ ಅಗತ್ಯವಿಲ್ಲ. ಆಯ್ದ ಕೆಲವು ದೇವಾಲಯಗಳಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ. ದಸರಾ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದರು.

ದಸರಾದ ವೈಭವವನ್ನು ಸಾರ್ವಜನಿಕರು ವೀಕ್ಷಿಸಲು ಸಹಾಯಕವಾಗುವಂತೆ ನಗರದ ವಿವಿಧೆಡೆಗಳಲ್ಲಿ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಈ ಪರದೆಗಳ ಮೂಲಕ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ. ಸಾರ್ವಜನಿಕರು ಸಹಕರಿಸುವ ಮೂಲಕ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅವರು ಮನವಿ ಮಾಡಿದರು.

ಇದಕ್ಕೂ ಮೊದಲು ಸಭೆಯಲ್ಲಿ ಮಾತನಾಡಿದ ಮೇಯರ್ ಸುನಿತಾ ಅಣ್ಣಪ್ಪ, ದಸರಾವನ್ನು ಸರಳವಾಗಿ ಆಚರಿಸಲು ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.

See also  ರಾಜೀನಾಮೆ ನೀಡಿದ ಬಳಿಕ ಇಂದು ಮೊದಲ ಬಾರಿಗೆ ಬಿ. ಎಸ್. ಯಡಿಯೂರಪ್ಪ ತವರು ಜಿಲ್ಲೆಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು