ಶಿವಮೊಗ್ಗ: ಕಳೆದ ಕೆಲವು ದಿನಗಳ ಹಿಂದೆ ಕಡಜದ ಹುಳುಗಳ ದಾಳಿಯಿಂದ ಭದ್ರಾವತಿ ತಾಲೂಕಿನಲ್ಲಿ ಇಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ, ಕೃಷಿ ಕೂಲಿ ಕಾರ್ಮಿಕ ಕುಮಾರ್ (38) ಮೃತಪಟ್ಟಿದ್ದು, ಇವರು ಕೆಂಚಮ್ಮನಹಳ್ಳಿಯ ರಂಗಪ್ಪ ಎಂಬುವರರ ತೆಂಗಿನ ತೋಟದಲ್ಲಿ ಕಾಯಿ ಕೀಳುವ ಕೆಲಸ ಮಾಡುತ್ತಿದ್ದಾಗ ಭಾನುವಾರ ಬೆಳಗ್ಗೆ ಕಡಜದ ಹುಳುಗಳು ದಾಳಿ ನಡೆಸಿವೆ.
ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ಮೊದಲು ನಗರದ ದುರ್ಗಾ ನರ್ಸಿಂಗ್ ಹೋಂಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ನಾರಾಯಣ ಹೃದಯಾಲಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗಿನ ಜಾವ ಮೃತಪಟ್ಟಿದ್ದಾರೆ.