ಶಿವಮೊಗ್ಗ :ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶಿವಮೊಗ್ಗದಲ್ಲಿ ನಡೆಯಲಿರುವ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಹೊರಟ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ಕೋರಿದರು.
ಸೆಪ್ಟೆಂಬರ್ 24ರಂದು ಬೆಳಿಗ್ಗೆ 9:00 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿದ ರಾಜ್ಯಪಾಲರು ಮೊದಲಿಗೆ ತುಮಕೂರು ಜಿಲ್ಲೆಗೆ ಆಗಮಿಸಿದಾಗ ಅಲ್ಲಿನ ಜಿಲ್ಲಾಧಿಕಾರಿಗಳಾದ ವೈ ಎಸ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಣಿ, ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಸಿದ್ದೇಗೌಡ ಅವರು ಸ್ವಾಗತ ಕೋರಿ, ಬೀಳ್ಕೊಟ್ಟರು.
ಬಳಿಕ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ ರಾಜ್ಯಪಾಲರಿಗೆ ಅಲ್ಲಿನ ಜಿಲ್ಲಾಧಿಕಾರಿಗಳಾದ ಕವಿತಾ ಮನ್ನಿಕೆರೆ, ಸಿಇಓ ನಂದಿನಿ, ಎಸ್ಪಿ ರಾಧಿಕಾ ಜಿ ಅವರು ಸ್ವಾಗತ ಕೋರಿ, ಬೀಳ್ಕೊಟ್ಟರು.
ನಂತರ ದಾವಣಗೆರೆ ಜಿಲ್ಲೆಗೆ ಆಗಮಿಸಿದ ರಾಜ್ಯಪಾಲರಿಗೆ ಅಲ್ಲಿನ ಜಿಲ್ಲಾಧಿಕಾರಿಗಳಾದ ಮಾಂತೇಶ ಬೀಳಗಿ, ಎಸ್ಪಿ ಸಿಬಿ ರಿಷ್ಯಂತ್ ಅವರು ಸ್ವಾಗತಕೋರಿ ಬೀಳ್ಕೊಟ್ಟರು.
ಬಳಿಕ ಶಿವಮೊಗ್ಗಕ್ಕೆ ಬಂದಿಳಿದ ರಾಜ್ಯಪಾಲರಿಗೆ ಸಂಸದರಾದ ಬಿವೈ ರಾಘವೇಂದ್ರ, ಮೇಯರ್ ಸುನಿತಾ ಅಣ್ಣಪ್ಪ, ಶಿವಮೊಗ್ಗದ ಜಿಲ್ಲಾಧಿಕಾರಿಗಳಾದ ಕೆ ಬಿ ಶಿವಕುಮಾರ್, ಎಸ್ಪಿ ಲಕ್ಷ್ಮೀಪ್ರಸಾದ್, ಕುಲಪತಿ ಡಾಕ್ಟರ್ ಕೆ ನಾಯಕ್ ಅವರುಗಳು ಹೂಗುಚ್ಛ ನೀಡಿ ಸ್ವಾಗತ ಕೋರಿದರು.ರಾಜ್ಯಪಾಲರಿಗೆ ಜಿಲ್ಲಾಡಳಿತಗಳ ವತಿಯಿಂದ ಗೌರವರಕ್ಷೆ ನೀಡಲಾಯಿತು.ಬಳಿಕ ರಾಜ್ಯಪಾಲರು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಿದರು,.