News Kannada
Thursday, December 01 2022

ಶಿವಮೊಗ್ಗ

ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ - 1 min read

Photo Credit : IANS

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕು ಬಸ್​ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತೆಯನ್ನು ಯುವಕರ ಗುಂಪೊಂದು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಜನವರಿ 15ರಂದು ಬಾಲಕಿ ಹೊಸನಗರ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತಾ ನಿಂತಿದ್ದಳು. ಈ ವೇಳೆ  ಬಾಲಕಿಯ ಮನೆಗೆ ಜೆಸಿಬಿ ಕೆಲಸಕ್ಕೆಂದು ಬರುತ್ತಿದ್ದ ಸಮಯದಲ್ಲಿ ಪರಿಚಯವಾಗಿದ್ದ ಸಂತೋಷ ಮತ್ತು ಸುನಿಲ್ ಇಬ್ಬರು ಬಾಲಕಿಯನ್ನು ಕರೆದು ನಾವು ನಿಮ್ಮ ಗ್ರಾಮಕ್ಕೆ ಹೋಗುತ್ತಿದ್ದೇವೆಂದು ಪುಸಲಾಯಿಸಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗಿ ವಿಡಿಯೋ ಸಹ ಮಾಡಿಕೊಂಡಿದ್ದು, ಈ ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಬಾಲಕಿ ಈ ಬಗ್ಗೆ ಪೋಷಕರ ಬಳಿ ಬಾಯ್ಬಿಟ್ಟಿರಲಿಲ್ಲ.

ಇದಾದ ಬಳಿಕ ಯುವಕರು ಮತ್ತೆ ತಮ್ಮ ಜೊತೆ ಬರುವಂತೆ ಬಾಲಕಿಗೆ ಒತ್ತಾಯಿಸಿದ್ದಾರೆ. ಆದರೆ, ಬಾಲಕಿ ಪುನಃ ಕರೆದಾಗ ನಿರಾಕರಿಸಿದ್ದಾಳೆ. ಬಾಲಕಿ ನಿರಾಕರಿಸಿದ್ದಕ್ಕೆ ಬೇರೆಯವರ ಮೊಬೈಲ್​ಗೆ ಅತ್ಯಾಚಾರದ ವಿಡಿಯೋ ಕಳುಹಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಜ. 21ರಂದು ಹೊಸನಗರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದಾರೆ.

ದೂರು ಆಧರಿಸಿ ಆರೋಪಿಗಳಾದ ಸಂತೋಷ್ (24) ಹಾಗೂ ಸುನೀಲ್ (26) ಅನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಯುವಕರು ಈ ಹಿಂದೆ ಬಾಲಕಿಯ ಮನೆಗೆ ಜೆಸಿಬಿ ಕೆಲಸಕ್ಕೆಂದು ಬಂದ ವೇಳೆ ಪರಿಚಯವಾಗಿದ್ದರು.

 

See also  ಶಿವಮೊಗ್ಗ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ : ಡ್ರೋನ್ ಕಣ್ಗಾವಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು