News Kannada
Wednesday, March 22 2023

ಶಿವಮೊಗ್ಗ

ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲಾ-ಕಾಲೇಜು ಪುನರಾರಂಭ; ಡಾ.ಆರ್.ಸೆಲ್ವಮಣಿ

Photo Credit :

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ  ಬಳಿಕ, ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ಅಲ್ಲದೇ ಶಾಲಾ-ಕಾಲೇಜುಗಳಿಗೆ ರಜೆಯನ್ನು  ಘೋಷಿಸಲಾಗಿತ್ತು. ಇದೀಗ ಪರಿಸ್ಥಿತಿ ತಿಳಿಗೊಂಡ ಹಿನ್ನಲೆಯಲ್ಲಿ ನಾಳೆಯಿಂದ ಶಾಲಾ-ಕಾಲೇಜು ಪುನರಾರಂಭಕ್ಕೆ ಡಿಸಿ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು, ನಾಳೆಯಿಂದ ನಗರದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭಕ್ಕೆ ಸೂಚಿಸಿದ್ದಾರೆ. ಈ ಮೂಲಕ ಕಳೆದ ಒಂದು ವಾರದಿಂದ ಬಂದ್ ಆಗಿದ್ದಂತ ಶಾಲಾ-ಕಾಲೇಜುಗಳು ನಾಳೆಯಿಂದ ಪುನರಾರಂಭಗೊಳ್ಳಲಿವೆ.

ಅಂದಹಾಗೇ ಬಜರಂಗದಳದ ಕಾರ್ಯಕರ್ತ ಹರ್ಷ ಕಳೆದ ಭಾನುವಾರದಂದು ಹತ್ಯೆಯಾಗಿತ್ತು. ಈಗಾಗಲೇ ಈ ಸಂಬಂಧ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಆರೋಪಿಗಳನ್ನು ಪೊಲೀಸರು ತನಿಖೆಗೂ ಒಳಪಡಿಸುತ್ತಿದ್ದಾರೆ. ಈ ಬೆನ್ನಲ್ಲೇ ಶಾಲಾ-ಕಾಲೇಜುಗಳಿಗೆ ಘೋಷಿಸಿದ್ದಂತ ರಜೆಯನ್ನು ರದ್ದು ಪಡಿಸಿ, ನಾಳೆಯಿಂದ ಪುನರಾರಂಭಕ್ಕೆ ಡಿಸಿ ಆದೇಶಿಸಿದ್ದಾರೆ.

See also  ಶಿವಮೊಗ್ಗ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ : ಡ್ರೋನ್ ಕಣ್ಗಾವಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು