News Kannada
Saturday, October 01 2022

ಶಿವಮೊಗ್ಗ

ಪ್ರಚೋದನಕಾರಿ ಹೇಳಿಕೆ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರಕರಣ ದಾಖಲು - 1 min read

Photo Credit :

ಶಿವಮೊಗ್ಗ : ಒಂದು ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗ ನಗರದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಿಯಾಜ್ ಅಹ್ಮದ್ ಎಂಬುವರು ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದೂರು ನೀಡಿದ್ದು, ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ ವಿರುದ್ಧ ದೂರು ದಾಖಲಾಗಿದೆ.

ಸಚಿವ ಕೆ.ಎಸ್. ಈಶ್ವರಪ್ಪ ಒಂದು ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಸಚಿವರ ಹೇಳಿಕೆ ಸಂವಿಧಾನ ಬಾಹಿರವಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ದೂರುದಾರ ರಿಯಾಜ್ ಅಹ್ಮದ್ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಸೂಚನೆ ಬಳಿಕ ದೊಡ್ಡಪೇಟೆ ಪೊಲೀಸರು ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಬಿಜೆಪಿ ಮುಖಂಡ ಚನ್ನಬಸಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಹಿಜಾಬ್ ವಿವಾದ ವಿರೋಧಿಗಳು ಬೇಕೆಂದೇ ನಡೆಸುತ್ತಿರುವ ಸಂಚು: ಸಚಿವ ಕೆ.ಎಸ್.ಈಶ್ವರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು