ಶಿವಮೊಗ್ಗ: ತಾಲೂಕಿನ ಚೋರಡಿಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ರವಿವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗ್ರಾಮದ ನಿವಾಸಿ ಜ್ಯೋತಿ(25), ಸಾನ್ವಿ (2) ಹಾಗೂ ಕುಶಾಲ್ (1) ಮೃತರು ಎಂದು ತಿಳಿದು ಬಂದಿದೆ. ಜ್ಯೋತಿ ತನ್ನಿಬ್ಬರು ಮಕ್ಕಳಿಗೆ ನೇಣು ಬಿಗಿದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಜ್ಯೋತಿ ಅವರಿಗೆ ಮದುವೆಯಾಗಿ ಐದು ವರ್ಷಗಳಾಗಿತ್ತು. ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕುಂಸಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ನಿಮ್ಮ ಜೀವನವು ಅಮೂಲ್ಯವಾದ್ದದ್ದು.