News Kannada
Monday, January 30 2023

ಶಿವಮೊಗ್ಗ

ರೈತರ ಹೊಲಗಳಿಗೆ ಜಿಲ್ಲಾಧಿಕಾರಿ ಭೇಟಿ, ಬೆಳೆ ಪರಿಹಾರ ಒದಗಿಸಲು ಕ್ರಮ: ಡಾ.ಆರ್.ಸೆಲ್ವಮಣಿ

Photo Credit :

ಶಿಕಾರಿಪುರ: ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಅವರು ಭಾನುವಾರ ಅತಿವೃಷ್ಟಿಯಿಂದ ಬೆಳೆಹಾನಿ ಸಂಭವಿಸಿರುವ ಶಿಕಾರಿಪುರ ತಾಲೂಕಿನ ಅಂಜನಾಪುರ ಹೋಬಳಿಯ ರೈತರ ಹೊಲಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಬೆಳೆ ಹಾನಿ ಕುರಿತು ಈಗಾಗಲೇ ಅಧಿಕಾರಿಗಳು ಪ್ರಾಥಮಿಕ ಹಾನಿ ವರದಿಯನ್ನು ಸಲ್ಲಿಸಿದ್ದಾರೆ. ಬೆಳೆ ಹಾನಿ ಕುರಿತು ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಈಗಾಗಲೇ ಜಂಟಿ ಸರ್ವೇ ಕಾರ್ಯವನ್ನು ಆರಂಭಿಸಿದ್ದಾರೆ. ಸರ್ವೇ ಬಳಿಕ ನಿಖರ ವರದಿಯನ್ನು ಪಡೆದು ಆದಷ್ಟು ಶೀಘ್ರ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಅಕಾಲಿಕ ಮಳೆಯಿಂದಾಗಿ ರೈತರು ಕಟಾವು ಮಾಡ ರಾಶಿ ಹಾಕಿದ್ದ ಮುಸುಕಿನ ಜೋಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಮಳೆಯಿಂದಾಗಿ ಮೊಳೆತು ಉಪಯೋಗಕ್ಕೆ ಬಾರದಂತಾಗಿರುವುದು ಕಂಡು ಬಂದಿದೆ. ಈ ಹಾನಿಗಳಿಗೆ ಯಾವ ರೀತಿಯಲ್ಲಿ ಪರಿಹಾರವನ್ನು ಒದಗಿಸಬಹುದು ಎಂಬುವುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಭತ್ತದ ಗದ್ದೆಗಳಿಗೆ ಮಳೆ ನೀರು ನುಗ್ಗಿ ಭತ್ತದ ಪೈರಿನಲ್ಲಿ ಕೆಸರು ತುಂಬಿ ಹಾಳಾಗಿದೆ. ಕೆರೆಗಳ ಏರಿಗಳು ಒಡೆಯದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಕೆರೆಗಳ ಅಭಿವೃದ್ಧಿಪಡಿಸಲು ಗ್ರಾಮ ಪಂಚಾಯತ್‌ಗಳಿಗೆ ಪೂರ್ಣ ಅಧಿಕಾರವಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ ತಮ್ಮ ಗ್ರಾಮಗಳಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಬಹುದಾಗಿದೆ ಎಂದು ಅವರು ಹೇಳಿದರು.

ಬೆಳೆ ಹಾನಿ ವಿವರ: ಜಿಲ್ಲೆಯಲ್ಲಿ ಮೇ 17ರಿಂದ 21ರವರೆಗೆ ಬಿದ್ದ ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ 3097 ಹೆಕ್ಟೇರ್ ಬೆಳೆ ಹಾನಿಯನ್ನು ಅಂದಾಜಿಸಲಾಗಿದೆ. ಇದರಲ್ಲಿ 2518 ಹೆಕ್ಟೇರ್ ಮುಸುಕಿನ ಜೋಳ ಮತ್ತು 486 ಭತ್ತದ ಬೆಳೆಗಳಿಗೆ ಹಾನಿಯಾಗಿದೆ. ಸುಮಾರು 20 ಹೆಕ್ಟೇರ್ ಪ್ರದೇಶದಲ್ಲಿ ಹೂಳು ತುಂಬಿದೆ. ಶಿಕಾರಿಪುರದಲ್ಲಿ 250ಹೆಕ್ಟೇರ್ ಭತ್ತ ಮತ್ತು 1230ಹೆಕ್ಟೇರ್ ಮುಸುಕಿನ ಜೋಳಕ್ಕೆ ಹಾನಿಯಾಗಿದ್ದು, ಸೊರಬ ತಾಲೂಕಿನಲ್ಲಿ 128ಹೆಕ್ಟೇರ್ ಭತ್ತ ಮತ್ತು 1244ಹೆಕ್ಟೇರ್ ಮುಸುಕಿನ ಜೋಳಕ್ಕೆ ಹಾನಿಯಾಗಿದೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಅವರು ಅತ್ತಿಬೈಲು, ಹಾರೋಗೊಪ್ಪಾ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಕಾರಿಪುರ ತಹಶೀಲ್ದಾರ್ ಕವಿರಾಜ್, ಕೃಷಿ ಹಾಗೂ ಕಂದಾಯ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

See also  ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿ ಸಡಿಲಿಕೆ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು