News Kannada
Friday, September 30 2022

ಶಿವಮೊಗ್ಗ

ಶಿವಮೊಗ್ಗ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ - 1 min read

17-year-old girl found murdered in field
Photo Credit :

ಶಿವಮೊಗ್ಗ: ಪ್ರೀತಿಸುತ್ತಿದ್ದ ಹುಡುಗಿ ದೂರವಾಗಿದ್ದಕ್ಕೆ ಮನನೊಂದ ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಹಾಸನ ಜಿಲ್ಲೆ ಅರಸೀಕೆರೆಯ ದಿಲೀಪ್, ಈತ ಬೆಂಗಳೂರಿನ ಗಾರ್ಮೆಂಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ವೇಳೆ ಅದೇ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯೊಂದಿಗೆ ಪ್ರೀತಿ ಬೆಳೆದಿತ್ತು ಎನ್ನಲಾಗಿದೆ.

ಕೆಲ ವರ್ಷಗಳ ಕಾಲ ಇಬ್ಬರೂ ಒಟ್ಟಿಗೆ ಓಡಾಡಿಕೊಂಡಿದ್ದು, ಆದರೆ ಇತ್ತೀಚೆಗೆ ಯುವತಿ ತನ್ನ ಕುಟುಂಬ ಈ ಪ್ರೀತಿಗೆ ಒಪ್ಪುವುದಿಲ್ಲವೆಂದು ಹೇಳಿ ಯುವಕನಿಂದ ದೂರವಾಗಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ದಿಲೀಪ್ ಯುವತಿ ಗ್ರಾಮಕ್ಕೆ ತೆರಳಿ ಅಲ್ಲಿನ ಕೆರೆ ಏರಿ ಮೇಲೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದಕ್ಕೂ ಮುನ್ನ ಈತ ಸೆಲ್ಫಿ ವಿಡಿಯೋ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

See also  ಮಹಾರಾಷ್ಟ್ರದ ಬೆಳವಣಿಗೆಗಳ ಬಗ್ಗೆ ಪಕ್ಷದ ಮುಖಂಡರ ಜತೆ ಸಂಪರ್ಕದಲ್ಲಿದ್ದೇನೆ: ಸಿಟಿ ರವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು