ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯ ಕುರಿತು ಸಂಸದರಾದ ಬಿ.ವೈ ರಾಘವೇಂದ್ರ ಅವರು ಸರ್ಕ್ಯೂಟ್ ಹೌಸ್ ನಲ್ಲಿ ಅಧಿಕಾರಿಗಳೊಂದಿಗೆ ವಿಶೇಷ ಸಭೆಯನ್ನು ನಡೆಸಿ, ತ್ವರಿತ ಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೆ ಎಸ್ ಐ ಡಿಸಿ ಮ್ಯಾನೇಜಿಂಗ್ ಡೈರೆಕ್ಟರ್ ಎಂ.ಆರ್ ರವಿ ಅವರು, ಇ. ಡಿ ಪ್ರಕಾಶ್, ನಿರ್ದೇಶಕರಾದ ಗಾಯತ್ರಿದೇವಿ, ಲೋಕೋಪಯೋಗಿ ಸಿ. ಇ ಕಾಂತರಾಜ್, ಮೆಸ್ಕಾಂ ಎಸ್ ಇ ಶಶಿಧರ, ಅಪಾರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಕೆಪಿಟಿಸಿಎಲ್ ಎಸ್ ಇ ಸುರೇಶ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.