ಶಿವಮೊಗ್ಗ: ರಾಜ್ಯದಲ್ಲಿ ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸುತ್ತಿರುವ ಗೋಶಾಲೆಗಳಿಗೆ ಅಗತ್ಯ ಆರ್ಥಿಕ ನೆರವು ನೀಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದರು.
ಇಲ್ಲಿಗೆ ಸಮೀಪದ ಹುಣಸೋಡು ಗ್ರಾಮದ ದ್ಯಾನೇಶ್ವರಿ ಗೌಶಾಲೆಗೆ ನ.25ರ ಶುಕ್ರವಾರ ಕರ್ಕಿ ಶ್ರೀಮಠದ ಸಹಯೋಗದೊಂದಿಗೆ ಭೇಟಿ ನೀಡಿ ಗೋಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಹಿಂದೆ ಘೋಷಿಸಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆಗಳನ್ನು ಸ್ಥಾಪಿಸಲು ಸ್ಥಳವನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.
ಗೋಶಾಲೆಗಳಲ್ಲಿ ಪ್ರತಿ ಪ್ರಾಣಿಯ ಭತ್ಯೆಯನ್ನು ಗುಜರಾತ್ ನಂತೆ ದಿನಕ್ಕೆ 17 ರೂ.ಗಳಿಂದ 30 ರೂ.ಗಳಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.