ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ, ಮಲೆನಾಡು ಭಾಗದ ರೈತರ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಸೋಮವಾರ ಬೃಹತ್ ಜನಾಕ್ರೋಶ ಸಮಾವೇಶ ಆಯೋಜಿಸಲಾಗಿತ್ತು.
ಈ ಬೃಹತ್ ಜನಾಕ್ರೋಶ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ಪಕ್ಷದ ಜಿಲ್ಲಾಧ್ಯಕ್ಷ ಸುಂದರೇಶ್, ಶಾಸಕ ಸಂಗಮೇಶ್ ಮತ್ತಿತರರು ಪಾಲ್ಗೊಂಡಿದ್ದರು.