News Kannada
Monday, January 30 2023

ಶಿವಮೊಗ್ಗ

ಶಿವಮೊಗ್ಗ: ಡಿಸಿಸಿ ಬ್ಯಾಂಕಿನಿಂದ ‘ಮೊಬೈಲ್ ಆ್ಯಪ್’ ಬಿಡುಗಡೆ

Shimoga: DCC Bank launches 'Mobile App'
Photo Credit : By Author

ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಡಿ. 13ರಂದು ನಬಾರ್ಡ್ ಕರ್ನಾಟಕ ಪ್ರಾದೇಶಿಕ ಕಛೇರಿ, ಬೆಂಗಳೂರು ಇದರ ಮುಖ್ಯ ಮಹಾ ಪ್ರಬಂಧಕರಾದ  ಟಿ. ರಮೇಶ್ ರವರು ಭೇಟಿ ನೀಡಿದ್ದು, ಬ್ಯಾಂಕಿನ ವ್ಯವಹಾರಗಳು, ಲಾಭಗಳಿಕೆ, ಕೃಷಿ ಸಾಲ ಹಂಚಿಕೆ, ಆರ್ಥಿಕ ಸ್ಥಿತಿಗತಿಗಳ ಅವಲೋಕನ ನಡೆಸಿ, ಬ್ಯಾಂಕು ಆರ್ಥಿಕ ಸದೃಡತೆಯನ್ನು ಹೊಂದಿದ್ದು, ಪ್ರಗತಿಯತ್ತ ಸಾಗುತ್ತಿರುವ ಬಗ್ಗೆ ಪ್ರಶಂಸಿದರು.

ಇದೇ ಸಂದರ್ಭದಲ್ಲಿ ಬ್ಯಾಂಕು ಗ್ರಾಹಕರಿಗೆ ಒದಗಿಸುತ್ತಿರುವ ‘ಮೊಬೈಲ್ ಆ್ಯಪ್’ ಸೇವೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಎಂ.ಬಿ. ಚನ್ನವೀರಪ್ಪನವರು ಮಾತನಾಡಿ ಬ್ಯಾಂಕಿನ ಗ್ರಾಹಕರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ ಮೂಲಕ ಮೊಬೈಲ್ ಆ್ಯಪ್ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು, ಬ್ಯಾಂಕು ಮೊದಲ ಹಂತದಲ್ಲಿ ನಾನ್ ಫಂಡ್ ಸೇವೆಗಳನ್ನು ಮಾತ್ರ ಒದಗಿಸುತ್ತಿದ್ದು, ಗ್ರಾಹಕರ ಖಾತೆಗಳ ಬ್ಯಾಲೆನ್ಸ್, ಮಿನಿ ಪಾಸ್ ಬುಕ್, ಬ್ಯಾಂಕಿನ ಸಾಮಾನ್ಯ ಮಾಹಿತಿಗಳು, ಪಾಸಿಟೀವ್ ಪೇ ಸಿಸ್ಟ್ಂ ನಡಿಯಲ್ಲಿ ಗ್ರಾಹಕರು ನೀಡಿದ ಚೆಕ್ ವಿವರಗಳನ್ನು ಬ್ಯಾಂಕಿಗೆ ಒದಗಿಸಬಹುದಾಗಿದೆ ಎಂದು ಮುಂದಿನ ದಿನಗಳಲ್ಲಿ ಫಂಡ್ ಆಧಾರಿತ ಸೌಲಭ್ಯಗಳನ್ನು ಕಲ್ಪಿಸಲಾಗುವುದೆಂದು ತಿಳಿಸಿದರು ಹಾಗೂ ಗ್ರಾಹಕರು ತಮ್ಮ ಓಟಿಪಿ, ಪಾಸ್ ವರ್ಡ್, ಎಂಪಿನ್ ಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದೆಂದು, ಗೌಪ್ಯತೆ ಕಾಪಾಡಿಕೊಳ್ಳಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಹೆಚ್.ಎಲ್.ಷಡಾಕ್ಷರಿಯವರು, ಮುಖ್ಯ ಕಾರ್ಯನಿರ್ವಾಹಕರಾದ ನಾಗೇಶ್. ಎಸ್.ಡೋಂಗರೆಯವರು, ಸಹಕಾರ ಸಂಘಗಳ ಉಪ ನಿಬಂಧಕರಾದ ಜಿ.ವಾಸುದೇವರವರು, ನಬಾರ್ಡ್ ಜಿಲ್ಲಾ ಅಧಿಕಾರಿಗಳಾದ  ರವಿಯವರು ಹಾಗೂ ಬ್ಯಾಂಕಿನ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.

ಶಾಖೆಗಳಿಂದ ಹೆಚ್ಚಿನ ಮಾಹಿತಿ ಪಡೆದು ಬ್ಯಾಂಕಿನ ಮೊಬೈಲ್ ಅ್ಯಪ್ ಮತ್ತು ಎಲ್ಲಾ ಸೇವಾ ಸೌಲಭ್ಯಗಳ ಪ್ರಯೋಜನವನ್ನು ಪಡೆಯಬೇಕೆಂದು ಮಾನ್ಯ ಅಧ್ಯಕ್ಷರು ತಿಳಿಸಿದರು.

See also  ಮಂಗಳೂರು: ಪ್ರಧಾನಿ ಮೋದಿ ಭದ್ರತೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ- ಅರಗ ಜ್ಞಾನೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು