News Kannada
Tuesday, February 07 2023

ಶಿವಮೊಗ್ಗ

ಶಿವಮೊಗ್ಗ: ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾದ ಬಿ.ವೈ ರಾಘವೇಂದ್ರ

Shivamogga: B Y Raghavendra meets Nirmala Sitharaman
Photo Credit : By Author

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾದ ಬಿ ವೈ ರಾಘವೇಂದ್ರರವರು ಡಿ.15ರಂದು  ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ಭೇಟಿ ಮಾಡಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಬಂಡವಾಳ ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಸದರಿ ಕಾರ್ಖಾನೆಯ ಪುನರುಶ್ಚೇತನ ಗೊಳಿಸಲು, ಕಾರ್ಯಪಡೆಯ ಸಾಮರ್ಥ್ಯ ಮತ್ತು ಚಾಲ್ತಿಯಲ್ಲಿರುವ ಕಾರ್ಮಿಕ ಸಂಸ್ಕೃತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಉಕ್ಕು ಪ್ರಾಧಿಕಾರದ ಮುಖೇನ ಅಗತ್ಯ ಬಂಡವಾಳವನ್ನು ಹೂಡಲು ಸೂಕ್ತ ಕ್ರಮವನ್ನು ಕೈಗೊಳ್ಳಲು ಕೋರಲಾಯಿತು.

ರಕ್ಷಣಾ, ಪರಮಾಣು, ಆಟೋಮೊಬೈಲ್ ಹಾಗೂ ರೈಲ್ವೆ ವಲಯಗಳ ವಿವಿಧ ಅಗತ್ಯತೆಗಳನ್ನು ಪೂರೈಸುವ ಮೂಲಕ ”ಆತ್ಮ ನಿರ್ಭರ ಭಾರತ’ ಅಭಿವೃದ್ಧಿಗೆ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಕೊಡುಗೆ ನೀಡಬಹುದು ಎಂದು ಮನವಿ ಮಾಡಿದರು. ಕಾರ್ಖಾನೆಯ ಕಾರ್ಮಿಕ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ಹಾಗೂ ಇತರೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

See also  ಶಿವಮೊಗ್ಗ: ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಅವಕಾಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು