News Kannada
Tuesday, February 07 2023

ಶಿವಮೊಗ್ಗ

ಶಿವಮೊಗ್ಗ: ಬಿಜೆಪಿ ಸರ್ಕಾರದ ಶಿಕ್ಷಣದ ನೀತಿಯ ವಿರುದ್ಧ ಎನ್ ಎಸ್ ಯು ಐ ಭಾರಿ ಪ್ರತಿಭಟನೆ

Shimoga: NSUI stage massive protest against BJP government's education policy
Photo Credit : By Author

ಶಿವಮೊಗ್ಗ, ಡಿ.17: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಸೈನ್ಸ್ ಮೈದಾನದಿಂದ ಸಾವಿರಾರು ವಿದ್ಯಾರ್ಥಿಗಳು ಎನ್.ಎಸ್.ಯು.ಐ. ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಮಹಾವೀರವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಮುಖಂಡ ಹಾಗೂ ಪದವೀಧರರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್, ಕೇಂದ್ರ ಸರ್ಕಾರ ಯಾವುದೇ ಪೂರ್ವ ತಯಾರಿ ಇಲ್ಲದೇ ಜಾರಿಗೊಳಿಸಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ ವಿರೋಧಿ ನೀತಿಯಿಂದಾಗಿ ವಿದ್ಯಾರ್ಥಿಗಳಿಗೆ ಅನಗತ್ಯ ತೊಂದರೆ, ಹೊರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಮುಖ್ಯವಾಗಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ವಿಳಂಬವಾಗುತ್ತಿದೆ. ವಾರ್ಷಿಕ ಪ್ರವೇಶ ಶುಲ್ಕದಲ್ಲಿ ವಿಪರೀತ ಹೆಚ್ಚಳವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಸತಿ ಸಮಸ್ಯೆ, 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಾಗಿಲ್ಲ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯದ ಸಮಸ್ಯೆ ಉಂಟಾಗಿದೆ.

ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ ಸ್ಥಗಿತಗೊಳಿಸಲಾಗಿದೆ. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಣೆ ಮಾಡುತ್ತಿಲ್ಲ. ಕುವೆಂಪು ಮುಕ್ತ ವಿಶ್ವವಿದ್ಯಾಲಯದ ಪರೀಕ್ಷಾ ನಕಲು, 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿ ವೇತನ ರದ್ದುಪಡಿಸಿರುವುದು,

ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಮುಂತಾದ ಸಮಸ್ಯೆಗಳು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದ ಉಂಟಾಗಿದ್ದು, ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಕೂಡಲೇ ಸರ್ಕಾರಗಳು ಈ ದ್ವಂದ್ವ ನೀತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ವಿಜಯ್ ಮಾತನಾಡಿ, ಕೂಡಲೇ ಸ್ಥಗಿತಗೊಳಿಸಿರುವ ಪದವಿ ವಿದ್ಯಾರ್ಥಿಗಳ ಲ್ಯಾಪ್‍ಟಾಪ್ ಯೋಜನೆ ಜಾರಿಗೊಳಿಸಬೇಕು. 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಪುನಃ ಜಾರಿಗೊಳಿಸಬೇಕು.

ಗ್ರಾಮಾಂತರ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ, ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಬಸ್‍ಪಾಸ್ ವಿಸ್ತರಣೆ, ವಸತಿ ಶಾಲೆಗಳ ಸಮಸ್ಯೆ ಸರಿಪಡಿಸಬೇಕು. ವಾರ್ಷಿಕ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ರದ್ದುಪಡಿಸಬೇಕು. ಪರೀಕ್ಷೆ ಫಲಿತಾಂಶದಲ್ಲಿ ವಿಳಂಬ ಮಾಡಬಾರದು, ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಅಗ್ರಹಿಸಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಮುಖ್ಯವಾಗಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ವಿಳಂಬವಾಗುತ್ತಿದೆ. ವಾರ್ಷಿಕ ಪ್ರವೇಶ ಶುಲ್ಕದಲ್ಲಿ ವಿಪರೀತ ಹೆಚ್ಚಳವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಸತಿ ಸಮಸ್ಯೆ, 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಾಗಿಲ್ಲ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯದ ಸಮಸ್ಯೆ ಉಂಟಾಗಿದೆ.

See also  ಮಂಡಗದ್ದೆ: ಪಕ್ಷಿ ಪ್ರಿಯರಿಗೆ ಅತ್ಯಂತ ಪ್ರಿಯವಾದ ತಾಣ

ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ ಸ್ಥಗಿತಗೊಳಿಸಲಾಗಿದೆ. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಣೆ ಮಾಡುತ್ತಿಲ್ಲ. ಕುವೆಂಪು ಮುಕ್ತ ವಿಶ್ವವಿದ್ಯಾಲಯದ ಪರೀಕ್ಷಾ ನಕಲು, 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿದ್ಯಾರ್ಥಿ ವೇತನ ರದ್ದುಪಡಿಸಿರುವುದು,

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಶಿಕ್ಷಣ ವಿರೋಧಿ ನೀತಿಯನ್ನು ಕೈಬಿಟ್ಟು, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಕೈಬಿಡಲು ಆದೇಶ ನೀಡಬೇಕು ಎಂದು ಒತ್ತಾಯಿಸಿದರಲ್ಲದೆ, ಇದೇ ರೀತಿ ಶಿಕ್ಷಣ ವಿರೋಧಿ ನೀತಿ ಮುಂದುವರೆಸಿದರೆ ವಿದ್ಯಾರ್ಥಿಗಳೊಂದಿಗೆ ಬೀದಿಗಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು