News Kannada
Wednesday, February 01 2023

ಶಿವಮೊಗ್ಗ

ಶಿವಮೊಗ್ಗ: ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಕಾರ್ಯಕ್ರಮ

Shimoga: National Youth Day and Youth Week
Photo Credit : Freepik

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಜ.12 ರಂದು ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಕಾಯಕ್ರಮವನ್ನು ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 11 ಕ್ಕೆ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಇವರು ನೆರವೇರಿಸುವರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರ ಘನ ಉಪಸ್ಥಿತಿ ಇರಲಿದೆ.

ಶಾಸಕರಾದ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲ್ಲಗಂಗೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ವ್ಯಕ್ತಿತ್ವ ವಿಕಸನ ಉಪನ್ಯಾಸಕರಾದ ರಮೇಶ್ ಉಮ್ರಾಣಿ ಉಪನ್ಯಾಸ ನೀಡುವರು.

See also  ಶಿವಮೊಗ್ಗ: ಸ್ವಯಂ ಸೇವಕಿ ಪ್ರಶಸ್ತಿಗೆ ಕು. ರಕ್ಷಿತಾ ಸಿ.ಡಿ.ರವರು ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು