ಶಿವಮೊಗ್ಗ: 2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ ಕೈಗೊಂಡು ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ದ ಎಡಿಡಿಎಲ್ ಡಿಸ್ಟ್ರಿಕ್ಟ್ ಆಂಡ್ ಸೆಷನ್ಸ್ ಕೋರ್ಟ್, ಎಫ್ ಟಿ ಎಸ್ ಸಿ –ಇಇ (ಪೊಕ್ಸೊ) ಶಿವಮೊಗ್ಗ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಮೋಹನ ಜೆ. ಎಸ್ ರವರು ದಿನಾಂಕ 11-01-2023 ರಂದು ಆರೋಪಿತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಾದ ಹೊಸನಗರ ತಾಲ್ಲೂಕಿನ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 30,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 01 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.