News Kannada
Sunday, February 05 2023

ಶಿವಮೊಗ್ಗ

ಶಿವಮೊಗ್ಗ: ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಗೆ ಜೈಲು ಶಿಕ್ಷೆ

Man sentenced to jail for sexually assaulting minor girl
Photo Credit : Pixabay

ಶಿವಮೊಗ್ಗ: 2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ ಕೈಗೊಂಡು ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ  ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ದ ಎಡಿಡಿಎಲ್ ಡಿಸ್ಟ್ರಿಕ್ಟ್ ಆಂಡ್ ಸೆಷನ್ಸ್ ಕೋರ್ಟ್, ಎಫ್ ಟಿ ಎಸ್ ಸಿ –ಇಇ (ಪೊಕ್ಸೊ) ಶಿವಮೊಗ್ಗ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಮೋಹನ ಜೆ. ಎಸ್ ರವರು ದಿನಾಂಕ 11-01-2023 ರಂದು ಆರೋಪಿತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಾದ ಹೊಸನಗರ ತಾಲ್ಲೂಕಿನ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 30,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 01 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.

See also  ಹರ್ಷ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ಮಾಡಬೇಕು : ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು