News Kannada
Saturday, February 04 2023

ಶಿವಮೊಗ್ಗ

ಶಿವಮೊಗ್ಗ: ಜ 28 ರಂದು ಹೊಳಲೂರು ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ

Shimoga: Revenue Minister's village stay at Holalur village on Jan 28
Photo Credit : Facebook

ಶಿವಮೊಗ್ಗ: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಜನವರಿ 28 ರಂದು ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು.

ಅಂದು ಬೆಳಿಗ್ಗೆ 11 ಗಂಟೆಯಿಂದ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡುವರು. ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಜ.28 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.

See also  ಗ್ರಾಮ ಪಂಚಾಯತ್‍ಗಳಿಗೆ ಕೆರೆ ಕುಂಟೆಗಳ ಅಭಿವೃದ್ಧಿ ಜವಾಬ್ದಾರಿ: ಸಚಿವ ಕೆ.ಎಸ್.ಈಶ್ವರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು