News Kannada
Thursday, June 01 2023
ಶಿವಮೊಗ್ಗ

ಶಿವಮೊಗ್ಗ: ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ ನೀಡಿದೆ- ಡಾ.ಕೆ.ಸಿ.ನಾರಾಯಣಗೌಡ

Shivamogga: The Constitution has given equal opportunity to everyone: Dr. K.C. Narayana Gowda
Photo Credit : By Author

ಶಿವಮೊಗ್ಗ, ಜ.25: ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಹಾಗೂ ಸಮಾನ ಅವಕಾಶವನ್ನು ನೀಡಲಾಗಿದೆ ಎಂದು ರೇಷ್ಮೆ, ಯುವಜನ ಸಬಲೀಕರಣ, ಕ್ರೀಡೆ ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣ್ ನುಡಿದರು.

ಇಂದು ಡಿ.ಎ.ಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 74ನೇ ಗಣ ರಾಜ್ಯೋತ್ಸವ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿ, ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ಏಕತೆಯನ್ನು ಸಾರುವ ನಮ್ಮ ದೇಶ ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನವನ್ನು ಹೊಂದಿದೆ ಎಂದರು.

ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದೀಜಿ ಮತ್ತು ನಿಕಟಪೂರ್ವ ಮುಖ್ಯಮಂತ್ರಿಗಳಾದ ಪೂಜ್ಯ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಚಿಕೆ ಇಟ್ಟು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕೈಗಾರಿಕೆ, ಪ್ರವಾsಸೋದ್ಯಮ ಆವೃತ್ತಿಗೆ ಪೂರಕವಾಗಿ ಚತುಷ್ಪಥ ರಸ್ತೆಗಳು, ವರ್ತುಲ ರಸ್ತೆಗಳು, ಸೇವೆಗಳು, ಹೊಸ ರೈಲು ಮಾರ್ಗ ಸಂಪರ್ಕಗಳಿಗೆ ಒತ್ತು ನಿಡಲಾಗಿದೆ. ಜಿಲ್ಲೆಯ ಜನತೆಯ ದಶಕಗಳ ಕನಸಾದ ಶಿವಮೊಗ್ಗ ದಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ.

ರೂ. 970 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು ಒಟ್ಟಾರೆ ರೂ. 1469 ಕೋಟಿ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಪ್ರಗತಿಯಲ್ಲಿವೆ.

ಲೋಕೋಪಯೋಗಿ ಇಲಾಖೆ ವತಿಯಿಂದ ಒಟ್ಟು 104 ರೂ. ವೆಚ್ಚದಲ್ಲಿ ಜಿಲ್ಲೆಯ ಒಟ್ಟು ಕೈಗೆತ್ತಿಕೊಳ್ಳಲಾಗಿದೆ. 190 ಕಿ.ಮೀ. ರಸ್ತೆ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.

ನಗರೋತ್ಥಾನ ಯೋಜನೆಯಡಿ ಜಿಲ್ಲೆಯ ನಗರಗಳ ಅಭಿವೃದ್ಧಿಗೆ ರೂ.148 ಅನುದಾನ ಒದಗಿಸಲಾಗಿದೆ. ಯೋಜನೆಯಡಿ ಸೊರಬ ಮತ್ತು ಹೊಸನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ರೂ.28.11 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಸಂಪರ್ಕ ಕಲ್ಪಿಸಲು ಜಿಲ್ಲೆಗೆ ಒಟ್ಟು ರೂ. 1031 ಕೋಟ ಮಂಜೂರಾಗಿದ್ದು, 2,27,672 ಮನೆಗಳಗೆ ನಲ್ಲಿ ಸಂಪರ್ಕ ಕಲ್ಪಿಸಲಾಗುತ್ತಿದೆ.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪ್ರಸ್ತುತ ಸಾಲಿನಲ್ಲಿ 133 ಕೋಟಿ ರೂ ಬಿಡುಗಡೆ ಮಾಡಿದ್ದು 328 ಕಿ.ಮೀ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪಿಎಂಜಿಎಸ್‍ವೈ ಯೋಜನೆಯಡಿಯಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಈ ಸಾಲಿನಲ್ಲಿ ರೂ. 31 ಕೋಟಿ ಅನುದಾನವನ್ನು ಒದಗಿಸಲಾಗಿದೆ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಕಳೆದ 4 ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ರೂ 476 ಕೋಟಿಗಳನ್ನು ಜಿಲ್ಲೆಯ 1,55,859 ರೈತರ ಖಾತೆಗೆ ಜಮಾ ಮಾಡಲಾಗಿದೆ.

ಸಣ್ಣ ನೀರಾವರಿ ಇಲಾಖೆಯಡಿ ರೂ.208 ಕೋಟಿ ಮೊತ್ತದ 308 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.ಪ್ರತಿಯೊಬ್ಬರಿಗೂ ಸೂರು ಒದಗಿಸುವುದು ನಮ್ಮ ಸರ್ಕಾರದ ದೃಢ ಸಂಕಲ್ಪವಾಗಿದೆ. ಬಸವ ಹಾಗೂ ಅಂಬೇಡ್ಕರ್, ವಸತಿ ಯೋಜನೆಯಡಿ ಜಿಲ್ಲೆಗೆ ಒಟ್ಟು 7688 ಮನೆಗಳ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ.

See also  ಮೃತ ಹರ್ಷ ಕುಟುಂಬಕ್ಕೆ ಹರಿದುಬಂದ ನೆರವು: ₹ 50 ಲಕ್ಷಕ್ಕೂ ಅಧಿಕ ಹಣ ಖಾತೆಗೆ ಜಮೆ

ಅಮೃತ ಗ್ರಾಮ ಯೋಜನೆಯಡಿ ಒಟ್ಟು 11 ಕೋಟಿ ಅನುದಾನವನ್ನು ಡುಗಡೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಈ ವರ್ಷ ಇದುವರೆಗೆ 28 ಲಕ್ಷ ಮಾನವ ದಿನ ಕೆಲಸ ನೀಡಲಾಗಿದ್ದು, 134 ಕೋಟಿ ಪಾವತಿಸಲಾಗಿದೆ. ಪ್ರತಿ ಗ್ರಾಮ ಪಂಚಾಯತ್‍ನಲ್ಲಿ ರೂ. 10ಲಕ್ಷ ವೆಚ್ಚದಲ್ಲಿ ಕ್ರೀಡಾ ಅಂಕಣ ನಿರ್ಮಾಣ ಮಾಡಲಾಗುತ್ತಿದೆ. ಅಡಿಕೆ ತೋಟಗಳಲ್ಲ ಕಾಣಿಸಿಕೊಂಡ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ 9794 ರೈತರಿಗೆ 1 ಕೋಟಿ ರೂ. ವೆಚ್ಚದಲ್ಲಿ ಉಚಿತವಾಗಿ ಔಷಧಿಯನ್ನು ವಿತರಿಸಲಾಗಿದೆ.

ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಣಿಸಿಕೊಂಡ ಜಾನುವಾರುಗಳ ಚರ್ಮಗಂಟು ನಿಯಂತ್ರಣಕ್ಕಾಗಿ ಜಿಲ್ಲೆಯ ಶೇಕಡ 93 ರಷ್ಟು ಜಾನುವಾರುಗಳಗ ಲಸಿಕೆ ಹಾಕಲಾಗಿದೆ. ರೋಗದಿಂದ ಮರಣ ಹೊಂದಿದ 329 ಜಾನುವಾರುಗಳ ಮಾಲಕರಿಗೆ 63.95 ಲಕ್ಷ ರೂ. ಪರಿಹಾರ ಧನ ವಿತರಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪೋಲಿಸ್ ಪಡೆ ಹಾಗೂ ವಿವಿಧ ತಂಡಗಳು ಆಕರ್ಷಕ ಪಥಸಂಚಲನ ಪ್ರದರ್ಶಿಸಿದವು. ವಿವಿಧ ಶಾಲಾ ಮಕ್ಕಳು ಅತ್ಯುತ್ತಮವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ಸರ್ಕಾರಿ ಬಾಲಕರ ಬಾಲ ಮಂದಿರದ ವಿದ್ಯಾರ್ಥಿಗಳಯ ಪ್ರಥಮ, ಸಾಂದೀಪಿನಿ ಪ್ರೌಢಶಾಲೆಯ ಬಾಲಕಿಯರು ದ್ವಿತೀಯ ಹಾಗೂ ಬಾಲಕರ ಎನ್ ಸಿಸಿ ತೃತೀಯ ಬಹುಮಾನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್, ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಜಿ.ಪಂ. ಸಿಇಒ ಎನ್.ಡಿ.ಪ್ರಕಾಶ್ ಇತರೆ ಅಧಿಕಾರುಗಳಯ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು