ಶಿವಮೊಗ್ಗ: ನರೇಂದ್ರ ಮೋದಿಯವರ ಸರ್ಕಾರವು ಅಡಿಕೆ ಬೆಳೆಗಾರರ ಹಿತವನ್ನು ಕಾಯಲು ಬದ್ಧವಾಗಿದೆ. ಹೊರ ದೇಶಗಳಿಂದ ಆಮದು ಆಗುತ್ತಿದ್ದ ಅಡಿಕೆ ದರವನ್ನು ₹100 ಹೆಚ್ಚಿಸಿದೆ. ಈವರೆಗೆ ಕನಿಷ್ಠ ಆಮದು ದರ ₹251 ಇದ್ದರೆ ಇನ್ನು ಮುಂದೆ ₹351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡುವ ಮೂಲಕ ಆಮದು ಮಾಡಿಕೊಳ್ಳಬೇಕಿದೆ.
ಅಡಿಕೆ ಬೆಳೆಗಾರರ ಸಂಕಷ್ಟಗಳು ಹಾಗೂ ಬೆಳೆಗೆ ಬಂದಿರುವ ಎಲೆ ಚುಕ್ಕೆ ರೋಗ ಮುಂತಾದವುಗಳಿಂದ ಅವರು ಸಾಕಷ್ಟು ಸಂಕಷ್ಟದಲ್ಲಿದ್ದು ಅವರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು ಹಾಗೂ ಅಡಿಕೆ ಆಮದು ದರವನ್ನು ಹೆಚ್ಚಿಸಬೇಕು ಎಂದು ಲೋಕಸಭೆಯಲ್ಲಿ ಸಂಸದರಾದ ಬಿ ವೈ ರಾಘವೇಂದ್ರ ಅವರು ಸರ್ಕಾರದ ಗಮನಕ್ಕೆ ತಂದಿದ್ದರು. ಇದಕ್ಕೆ ಕೇಂದ್ರ ಸರ್ಕಾರವು ಸೂಕ್ತವಾಗಿ ಸ್ಪಂದಿಸಿದೆ.
ಅಡಿಕೆ ಬೆಳೆಗಾರರ ಹಿತ ಕಾಯುವ ಕೇಂದ್ರದ ಈ ನಿರ್ಧಾರಕ್ಕಾಗಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರಿಗೆ ಹೃತ್ಪೂರ್ವಕವಾದ ಧನ್ಯವಾದಗಳನ್ನ ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.