News Kannada
Saturday, February 24 2024
ಶಿವಮೊಗ್ಗ

ಶಿವಮೊಗ್ಗ ಮತ್ತೆ ಉದ್ವಿಗ್ನ: ನಗರದಲ್ಲಿ 144 ಸೆಕ್ಷನ್​ ಜಾರಿ

Shimoga: Section 144 imposed in Shivamogga
Photo Credit : News Kannada

ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ನಿನ್ನೆ(ಅ.01) ಸಂಜೆ ಕಲ್ಲು ತೂರಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ. ಎರಡು ಕೋಮಿನ ಯುವಕರ ಗುಂಪಿನಿಂದ ಕಲ್ಲು ತೂರಾಟ ನಡೆದ ಪರಿಣಾಮ 7ಕ್ಕೂ ಹೆಚ್ಚು ಕಾರುಗಳು ಹಾಗೂ ಮನೆಯ ಕಿಟಕಿ ಗಾಜುಗಳು ಜಖಂಗೊಂಡಿವೆ.

ಕಲ್ಲು ತೂರಾಟದಿಂದ ಕೆಲವರಿಗೆ ಗಂಭೀರ ಗಾಯಗಳು ಸಹ ಆಗಿವೆ. ಘಟನೆಯಲ್ಲಿ 35ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತಷ್ಟು ಜನರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಗ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಘಟನೆ ನಡೆದ ಪ್ರದೇಶದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್​ ಜಾರಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು