News Kannada
Saturday, February 24 2024
ಮೈಸೂರು

ಮೈಸೂರು ಜಿಲ್ಲೆಯಲ್ಲಿ ದಡಾರ ಮತ್ತು ರುಬೆಲ್ಲಾ ಅಭಿಯಾನಕ್ಕೆ ಚಾಲನೆ

Photo Credit :

ಮೈಸೂರು ಜಿಲ್ಲೆಯಲ್ಲಿ ದಡಾರ ಮತ್ತು ರುಬೆಲ್ಲಾ ಅಭಿಯಾನಕ್ಕೆ ಚಾಲನೆ

ಮೈಸೂರು: ಮೈಸೂರು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಜರ್ಬಾದ್ನ ಎನ್ಪಿಸಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಮೈಸೂರು ಮೇಯರ್ ಎಂ.ಜೆ.ರವಿಕುಮಾರ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಿ.ರಂದೀಪ್, ದಡಾರ ಮತ್ತು ರುಬೆಲ್ಲಾ ಕಾಯಿಲೆ ಬರದಂತೆ ತಡೆಯುವ ಉದ್ದೇಶದಿಂದ ರಾಜ್ಯದಾದ್ಯಂತೆ ಲಸಿಕೆ ಹಾಕಲಾಗುತ್ತಿದ್ದು ಜ.5ರಂದು ಚಾಲನೆ ನೀಡಲಾಗಿದೆ. ಇಂದು ನಮ್ಮ ಮೈಸೂರು ಜಿಲ್ಲೆಯಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲೆಯಾದ್ಯಂತ ಸುಮಾರು 3000 ಶಾಲೆಗಳನ್ನು ಗುರುತಿಸಲಾಗಿದ್ದು, ಅಭಿಯಾನದಲ್ಲಿ ಕೈಜೋಡಿಸಿ ಯಶಸ್ವಿಗೊಳಿಸುವಂತೆ ಪತ್ರ ಬರೆಯಲಾಗಿದೆ. ಸುಮಾರು 7000 ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿ ಲಸಿಕೆ ಹಾಕಲಿದ್ದಾರೆ. ಜತೆಗೆ ಲಯನ್ಸ್ ಕ್ಲಬ್ ಸಹ ಅಭಿಯಾನದಲ್ಲಿ ಕೈಜೋಡಿಸಿದೆ ಎಂದು ಹೇಳಿದರು.

ಜಿಲ್ಲೆಯನ್ನು ದಡಾರ ಹಾಗೂ ರುಬೆಲ್ಲಾ ಮುಕ್ತ ಮಾಡುವ ಉದ್ದೇಶದಿಂದ ಲಸಿಕೆ ಹಾಕಲಾಗುತ್ತಿದ್ದು, ಪೋಷಕರು ಸಹಕರಿಸಬೇಕು. ಪ್ರತಿಯೊಬ್ಬರು ತಮ್ಮ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವುದಲ್ಲದೆ ಅಕ್ಕಪಕ್ಕದ ಮನೆಯವರಿಗೂ ಅರಿವು ಮೂಡಿಸಬೇಕು. ಲಸಿಕೆ ಹಾಕಿಸುವುದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಆಗುವುದಿಲ್ಲ. ಒಂದು ವೇಳೆ ಆದರೂ ಶಿಕ್ಷಕರು ಹಾಗೂ ವೈದ್ಯರಿಗೆ ಗುಣಪಡಿಸುವ ವಿಧಾನವನ್ನು ತಿಳಿಸಲಾಗಿದ್ದು, ಯಾವುದೇ ಆತಂಕವಿಲ್ಲದೆ ಲಸಿಕೆ ಹಾಕಿಸಬಹುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು