ಮೈಸೂರು: ನನಗೆ ಗೋಮಾಂಸ ತಿನ್ನಬೇಕೆನಿಸಿದರೆ ತಿನ್ನುತ್ತೇನೆ ಅದನ್ನು ತಡೆಯುವವರು ನೀವು ಯಾರು ಎಂದು ಬಿಜೆಪಿಗೆ ಸವಾಲು ಹಾಕಿದರು.
ಸಿದ್ದರಾಮಯ್ಯನವರ ಮಾತಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಈ ವರ್ತನೆ ವಿರುದ್ಧ ಅಗತ್ಯ ಕಾನೂನು ಕ್ರಮ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಒತ್ತಾಯಿಸುತ್ತೇವೆ ಎಂದರು.
964ರ ಗೋ ಸಂರಕ್ಷಣೆ ಕಾಯ್ದೆ ಪ್ರಕಾರ ಹಸು, ಕರು, ಎತ್ತುಗಳನ್ನು ಕೊಲ್ಲುವಂತಿಲ್ಲ ಎಂದು ಉಲ್ಲೇಖವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚೋದನಕಾರಿ ಹೇಳಿಕೆ ನೀಡಿ ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ ಎಂದು ಆರೋಪಿಸಿದರು.