ಮೈಸೂರು: ಚಾಮರಾಜನಗರದ ಜಿಲ್ಲಾಧಿಕಾರಿ ಮೇಲೆ ಹಲ್ಲೆ ನಡೆದ ಹಿನ್ನಲೆಯಲ್ಲಿ ಸರ್ಕಾರವ ನ್ನು ಎಚ್ಚರಿಸುವ ದೃಷ್ಟಿಯಿಂದ ಕೆಳಹಂತದ ಸರ್ಕಾರಿ ನೌಕರರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಗಾಯಗೊಂಡಿದ್ದ ಚಾಮರಾಜನಗರದ ಜಿಲ್ಲಾಧಿಕಾರಿ ಕುಂಜಪ್ಪ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆಯಲ್ಲಿ ಕರಿಕಲ್ಲು ಮಾಫಿಯಾ ಹೆಚ್ಚಾಗಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಹಿನ್ನಲೆಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದವರ ವಹಿವಾಟು ಬಂದ್ ಆಗಿದ್ದು, ಇದರಿಂದ ಆಕ್ರೋಶ ಗೊಂಡಿರುವವರು ಪ್ರತಿಭಟನೆಯ ರೂಪದಲ್ಲಿ ಹಿಂಸಾಚಾರಕ್ಕೆ ಇಳಿದಿದ್ದಾರೆ. ಏನೇ ಆದರೂ ಇಂತಹ ಅಕ್ರಮಗಳಿಗೆ ಜಿಲ್ಲಾಡಳಿತ ಅವಕಾಶ ನೀಡುವುದಿಲ್ಲ. ಅಂದು ನಡೆದ ಘಟನೆಗೆ ಸಂಬಂಧಿಸಿದಂತೆ ಘಟನೆ ನಡೆದ ವೃತ್ತದಲ್ಲಿ ಸಿಸಿಟಿವಿ ದೃಶ್ಯವಾಳಿಗಳನ್ನು ಪರಿಶೀಲಿಸಲಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.