News Kannada

ಮೈಸೂರು

ಇಂದು ಸಾಮೂಹಿಕ ವಿವಾಹದ ಶುಭಾರಂಭ - 1 min read

ಇಂದು ಸಾಮೂಹಿಕ ವಿವಾಹದ ಶುಭಾರಂಭ

ಮೈಸೂರು: ಸರ್ಕಾರದ ಯೋಜನೆಯಲ್ಲೊಂದಾದ ಸಾಮೂಹಿಕ ವಿವಾಹದ ಶುಭಾರಂಭ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಮಧ್ಯಾಹ್ನ 12.10ಕ್ಕೆ ವಿವಾಹಕಾರ್ಯಕ್ರಮ ನಡೆಯಲಿದೆ. ಮೊದಲ ಬಾರಿಗೆ ಸುಮಾರು 125 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಜಿಲ್ಲಾಡಳಿತ ಮದುವೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಮದುವೆಗೆ ಆಗಮಿಸುವವರಿಗೆ ಆಸನದ ವ್ಯವಸ್ಥೆ ಮತ್ತು ವಧುವರರಿಗೆ ವೇದಿಕೆಯ ವ್ಯವಸ್ಥೆಯನ್ನು ಮಾಡಲಾಗಿದೆ. ಈಗಾಗಲೇ ಎಲ್ಲ ಸಿದ್ಧತೆಗಳು ನಡೆದಿದ್ದು, ವಿವಾಹ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸಪ್ರಸಾದ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.

ತಾಳಿಗೆ ಅಗತ್ಯವಾದ ಬಂಗಾರವನ್ನು ರಾಜ್ಯದ ಪ್ರಮುಖ ಬಂಗಾರದ ವರ್ತಕರು ನೀಡಿದ್ದು, ಇದೇ ರೀತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಬಂಗಾರದ ವರ್ತಕರು ಹಾಗೂ ಶಕ್ತಿಯುಳ್ಳವರ ನೆರವು ಪಡೆಯಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.

ಇದೀಗ ಶುಭಾರಂಭ ಯೋಜನೆ ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿದ್ದು, ಕ್ರಮೇಣ ತಾಲೂಕು ಮಟ್ಟದಲ್ಲಿ ನಡೆಸಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ. ಮೈಸೂರಿನ ನಂಜನಗೂಡಿನಲ್ಲಿ ನಡೆಯುತ್ತಿರುವ  ವಿವಾಹ ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಮಧ್ಯಾಹ್ನ ನಡೆಯಲಿರುವ ವಿವಾಹ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.

See also  ಹುಟ್ಟೂರಲ್ಲಿ ಕೊನೆಯುಸಿರೆಳೆಯಬೇಕಿದ್ದ ವೃದ್ಧೆ ಆಸ್ಪತ್ರೆಯಲ್ಲೇ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು