ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಮನೆಯಲ್ಲಿನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಮೂವರನ್ನ ಬಂಧಿಸಿದ್ದಾರೆ.
ನವೆಂಬರ್ 23ರಂದು ರಾಷ್ಟ್ರಕವಿ ಕುವೆಂಪು ಕುವೆಂಪು ಮನೆಯಲ್ಲಿ ಕಳ್ಳತನ ನಡೆದಿತ್ತು. ಬಂಧಿತರಲ್ಲಿ ಪ್ರಮುಖ ಆರೋಪಿ ರೇವಣ್ಣನನ್ನ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿದ್ದು ತಾನೇ ಎಂದು ರೇವಣ್ಣ ತಪ್ಪೊಪ್ಪಿಕೊಂಡಿದ್ದಾನೆ. ಅಲ್ಲದೇ ರೇವಣ್ಣಗೆ ಸಹಾಯ ಮಾಡಿದ ಆಂಜನಪ್ಪ ಮತ್ತು ಪ್ರಕಾಶ್ ಎಂಬವರನ್ನೂ ಪೊಲೀಸರು ಬಂಧಿಸಿದ್ದಾರೆ.