ಮೈಸೂರು: ಮುಂದಿನ ಜಿಲ್ಲಾ ಪಂಚಾಯಿತಿ-ತಾಲೂಕು ಪಂಚಾಯಿತಿ ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ವಿಚಾರ ನಿರ್ಧಾರವಾಗಲಿದೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ.
ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯಾಧ್ಯಕ್ಷ ನೇಮಕ ವಿಚಾರವನ್ನು ಪಕ್ಷದ ಕೇಂದ್ರ ಸಂಸದೀಯ ಮಂಡಳಿ ನಿರ್ಧರಿಸಲಿದೆ. ಮುಂದಿನ ಚುನಾವಣೆಯ ನಂತರ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಲಿದೆ. ಮುಂದಿನ ಜಿ.ಪಂ-ತಾಪಂ ಚುನಾವಣೆಯಲ್ಲಿ ಪಕ್ಷ ಯಾರ ಜತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲವೆಂದು ಎಂದು ತಿಳಿಸಿದರು.
ನೂತನ ಲೋಕಾಯುಕ್ತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಒಳಗೊಂದು ಹೊರಗೊಂದು ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಲೋಕಾಯುಕ್ತದಂತಹ ನೇಮಕ ವಿಚಾರದಲ್ಲಿ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ಸರಿಯಲ್ಲ ಎಂದರು.