ಮೈಸೂರು: ನಿಗಧಿತ ಸೀಟುಗಳಿಗಿಂತಲೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಕೋರ್ಸ್ ಪ್ರವೇಶ ನೀಡಿದ ಮೈಸೂರು ಜೆಎಸ್ಎಸ್ ವೈದ್ಯಕೀಯ ಕಾಲೇಜಿಗೆ ಸುಪ್ರಿಂ ಕೋರ್ಟ್ 5 ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ.
2012 ರಲ್ಲಿ ನ್ಯಾಯಾಲಯ ನೀಡಿದ ಆದೇಶವನ್ನು ಜೆಎಸ್ಎಸ್ ವೈದ್ಯಕೀಯ ಕಾಲೇಜು ಪಾಲಿಸಿಲ್ಲ. ಹೆಚ್ಚುವರಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ನೀಡಿದೆ. ಈ ಹಿನ್ನಲೆಯಲ್ಲಿ ಇದೇ ರೀತಿ ನಿಯಮ ಉಲ್ಲಂಘಿಸಿ ಪ್ರವೇಶಾತಿ ಕಲ್ಪಿಸುವ ಕಾಲೇಜುಗಳಿಗೆ ಎಚ್ಚರಿಕೆಯಾಗಿ ಜೆಎಸ್ಎಸ್ ಕಾಲೇಜಿಗೆ 5 ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಮದನ್ ಬಿ ಲೋಕೂರ್ ಮತ್ತು ಆರ್.ಕೆ ಅಗರ್ವಾಲ್ ಪೀಠ ಈ ಆದೇಶ ನೀಡಿದ್ದು, ದಂಡದ ಮೊತ್ತವನ್ನು ನಾಲ್ಕು ವಾರಗಳ ಒಳಗೆ ಠೇವಣಿ ಇಡುವಂತೆ ಸೂಚನೆ ನೀಡಿದೆ.
ಜೆಎಸ್ಎಸ್ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿ 2016-17 ನೇ ಸಾಲಿನಲ್ಲಿ ಮಂಜೂರು ಮಾಡಲಾದಂತಹ 200 ಸೀಟುಗಳ ಪೈಕಿ 150 ಸೀಟುಗಳನ್ನು ಮಾತ್ರ ಭರ್ತಿ ಮಾಡಬೇಕು ಎಂದು ಖಡಕ್ ಸೂಚನೆ ನೀಡಿ 50 ಮೆಡಿಕಲ್ ಸೀಟ್ಗಳನ್ನು ಕಡಿತಗೊಳಿಸಿದೆ.