ಮೈಸೂರು: ಇದು ನನ್ನ ಕೊನೆಯ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು ಮೊದಲ ಬಾರಿಗೆ ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಮುಂದಿನ ಚುನಾವಣೆಗಳಿಂದ ದೂರು ಉಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಅನಾರೋಗ್ಯದಿಂದ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿದಿರುವ ಕಂದಾಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ತಮ್ಮ 41 ವರ್ಷಗಳ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಂದ ನಿಮ್ಮ ಆರೋಗ್ಯ ಮತ್ತಷ್ಟು ಹದಗೆಡುತ್ತದೆ. ಅಲ್ಲದೆ ಹೊಸಬರಿಗೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
41 ವರ್ಷದ ರಾಜಕೀಯ ರಂಗದಲ್ಲಿ ಮೈಸೂರು- ಚಾಮರಾಜನಗರದಿಂದ ಐದು ಬಾರಿ ಲೋಕ ಸಭಾ ಸದಸ್ಯನಾಗಿ ಹಾಗೂ ಎರಡು ಬಾರಿ ಶಾಸಕನಾಗಿ ಇದರಲ್ಲಿ ಒಂದು ಬಾರಿ ಕೇಂದ್ರ ಸಚಿವನಾಗಿ ಈಗ ರಾಜ್ಯ ಸಚಿವರಾಗಿ ಮತ್ತು ಕಾಂಗ್ರೆಸ್ ಪಕ್ಷದಲ್ಲೂ ಸಹ ಎಲ್ಲಾ ಸ್ಥಾನಗಳಲ್ಲೂ ಕಾರ್ಯನಿರ್ವಹಿಸಿದ ತಮ್ಮ ರಾಜಕೀಯ ಚುನಾವಣಾ ಜೀವನದಲ್ಲಿ ಎಲ್ಲಾ ರೀತಿಯ ಬೆಂಬಲ ನೀಡಿದ ಜಿಲ್ಲೆಯ ಜನತೆ ಮೆಚ್ಚುವಂತಹ ಕೆಲಸ ಮಾಡಿರುವುದು ಸಂತಸ ತಂದಿರುವುದಾಗಿ ತಿಳಿಸಿದ್ದಾರೆ.