ಮೈಸೂರು: ಪ್ರೀತಿ ವಿಷಯಕ್ಕೆ ಪಂಚಾಯ್ತಿಯವರು ಕಟ್ಟಪ್ಪಣೆ ಮಾಡಿ ಗ್ರಾಮಸ್ಥರು ಹಾಕಿದ ಬೆದರಿಕೆಗೆ ಹೆದರಿದ ಅಂತಿಮ ಬಿಎ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹುಣಸೂರು ತಾಲೂಕು ಬಿಳಕೆರೆ ಹೋಬಳಿಯ ಮರದೂರಿನಲ್ಲಿ ನಡೆದಿದೆ.
ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿಎ ಓದುತ್ತಿದ್ದ ವಿದ್ಯಾರ್ಥಿ ನಾಯಕ್(22) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಈ ವಿಷಯ ಗ್ರಾಮಸ್ಥರಿಗೆ ತಿಳಿದು ಗ್ರಾಮದಲ್ಲಿ ಪಂಚಾಯ್ತಿ ನಡೆಸಿ ಯುವಕನಿಗೆ ಯುವತಿಯನ್ನು ಪ್ರೀತಿಸುವುದನ್ನು ನಿಲ್ಲಿಸದಿದ್ದರೆ ಪೊಲೀಸರಿಗೆ ಹಿಡಿದು ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ.
ಪಂಚಾಯ್ತಿ ಯಾಜಮಾನರ ಬೆದರಿಕೆಯಿಂದ ಹೆದರಿದ ಯುವಕ ವಿಷಯ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಪಂಚಾಯ್ತಿ ನಡೆಸಿದ ಗ್ರಾಮದ ಒಂಭತ್ತು ಮಂದಿಯ ವಿರುದ್ದ ದೂರು ದಾಖಲಿಸಿಕೊಂಡಿರುವ ಬಿಳಕೆರೆ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.