ಮೈಸೂರು: ಈಶ್ವರಪ್ಪನವರಿಗೆ ಮಾತಿನ ಮೇಲೆ ಹಿಡಿತವಿಲ್ಲ. ಅವರ ನಾಲಿಗೆಗೂ ಮೆದುಳಿಗೂ ಲಿಂಕ್ ಇಲ್ಲದವರಂತೆ ಮಾತನಾಡುತ್ತಾರೆ. ಅವರಿಗೆ ತಾನೂ ಏನೂ ಮಾತನಾಡುತ್ತಿದ್ದೇನೆ ಎಂದು ಗೊತ್ತಾಗುವುದಿಲ್ಲವೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ನ ಗ್ರಾಮ ಸ್ವರಾಜ್ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿ ಮಾತನಾಡಿದರು. ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ಗೆ ಅಭ್ಯರ್ಥಿಗಳೇ ಇಲ್ಲ. ಆದರೆ ಕಾಂಗ್ರೆಸ್ನಲ್ಲಿ ಬಿಜೆಪಿ ಎಲ್ಲಾ ಕಡೆಗಳಲ್ಲೂ ಕಣಕ್ಕಿಳಿಯಲಿದ್ದು 20 ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಹಾಗೂ 100 ಹೆಚ್ಚು ತಾಲೂಕು ಪಂಚಾಯಿತಿಗಳಲ್ಲಿ ಜಯ ಸಾಧಿಸಲಿದೆ ಎಂದರು.
ಮೈಸೂರಿನಲ್ಲಿ ಗ್ರಾಮ ಸ್ವರಾಜ್ ಸಮಾವೇಶಕ್ಕೆ ಚಾಲನೆ ನೀಡಿದರು. ಕೇಂದ್ರದ ಬಿಜೆಪಿ ಸರ್ಕಾರ ಕಾರ್ಪೋರೇಟರ್ ಸರ್ಕಾರವಾಗಿದೆ ಎಂದು ಕೇಂದ್ರ ಬಿಜಪಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.
ದೇಶದಲ್ಲಿ ರೈತರ ಸರಣಿ ಆತ್ಮಹತ್ಯೆಯಾದರೂ ಕೇಂದ್ರ ಸರ್ಕಾರ ರೈತರ ನೆರವಿಗೆ ಬರಲಿಲ್ಲ. ರಾಜ್ಯಕ್ಕೂ ಸಹ ಸಾವನ್ನಪ್ಪಿದ ರೈತರಿಗೆ ಒಂದು ರೂ ಹಣವನ್ನು ಬಿಡುಗಡೆ ಮಾಡಿಲ್ಲವೆಂದು ಇಂತಹ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಅಗತ್ಯವಿದೆ ಎಂದು ಗೃಹ ಸಚಿವ ಪರಮೇಶ್ವರ್ ಬಿಜೆಪಿ ವಿರುದ್ಧ ಟೀಕ ಪ್ರಹಾರ ನಡೆಸಿದರು.