ಮೈಸೂರು: ಪಕ್ಷದ ಉಳಿವಿಗಾಗಿ ಕೆಲಸ ಮಾಡದ ಸಚಿವರನ್ನು ಸಚಿವ ಸಂಪುಟದಿಂದ ಕೈ ಬಿಡುವ ನಿರ್ಧಾರವನ್ನು ಸಿಎಂ ಸಿದ್ಧರಾಮಯ್ಯ ಮಾಡಬೇಕಿದೆ ಎಂದು ಕಾಂಗ್ರೆಸ್ ಮುಖಂಡ ಜನಾರ್ಧನಾ ಪೂಜಾರಿ ಒತ್ತಾಯಿಸಿದರು.
ಜಿಲ್ಲಾ ಪಂಚಾಯಿತ್ –ತಾಲೂಕು ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಲಸಕ್ಕೆ ಬಾರದ ಸಚಿವರಿಂದ ಪಕ್ಷಕ್ಕೆ ಯಾವುದೇ ಲಾಭವಿಲ್ಲ. ಧೈರ್ಯವಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಏಕೆ ಕೆಲಸ ಮಾಡದ ಸಚಿವರನ್ನು ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ತಿಳಿಯುತ್ತಿಲ್ಲ. ನಿಮ್ಮ ಪರವಾಗಿ ರಾಷ್ಟ್ರೀಯ ನಾಯಕರಾದ ರಾಹುಲ್ಗಾಂಧಿ ಹಾಗೂ ಸೋನಿಯಾಗಾಂಧಿ ಇದ್ದಾರೆ. ಕೆಲಸ ಮಾಡದ ಸಚಿವರನ್ನು ಕಿತ್ತು ಹಾಕಿ ಸಚಿವ ಸಂಪುಟ ಪುನರ್ ರಚಿಸುವಂತೆ ಜನಾರ್ಧನ ಪೂಜಾರಿ ಸಭೆಯಲ್ಲೇ ಮುಖ್ಯಮಂತ್ರಿಯವರಿಗೆ ಒತ್ತಾಯಿಸಿದರು.
ಏಕಾಎಕಿ ಸ್ವಪಕ್ಷದ ನಾಯಕನೇ ಪಕ್ಷದ ಸಾಮೂಹಿಕ ಸಮಾರಂಭದಲ್ಲಿ ಬಹಿರಂಗವಾಗಿ ಈ ರೀತಿ ಹೇಳುತ್ತಿದ್ದಂತೆ ಎದ್ದುನಿಂತ ಸಿಎಂ ಸಿದ್ದರಾಮಯ್ಯ ಬಾಯಿ ಮುಚ್ಚಿ ಸುಮ್ಮನಿರುವಂತೆ ಮಾರ್ಮಿಕವಾಗಿ ತಿಳಿಸಿದರು.