ಮೈಸೂರು: ಹುತಾತ್ಮರಾದ ರಾಜ್ಯದ ಮೂವರು ಯೋಧರ ಕುಟುಂಬಗಳಿಗೆ ರಾಜ್ಯಸರ್ಕಾರದಿಂದ 25 ನೀಡುವಂತೆ ಸೂಚಿಸಿರುವುದಾಗಿ ಸಿಎಂ ಸಿದ್ಧರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಮೈಸೂರಿನಲ್ಲಿ ಜಿಪಂ-ತಾಪಂ ಚುನಾವಣಾ ಪ್ರಚಾರ ಹಮ್ಮಿಕೊಂಡಿರುವ ಸಿಎಂ ಸಿದ್ಧರಾಮಯ್ಯ ಇಂದು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಹುತಾತ್ಮ ಯೋಧ ಮಹೇಶ್ ಶವ ತವರಿಗೆ ಆಗಮಿಸಿಲಿದೆ ಎಂದು ತಿಳಿಸಿದರು.
ಈ ಹಿನ್ನಲೆಯಲ್ಲಿ ಹೆಚ್,ಡಿ.ಕೋಟೆ ತಾಲೂಕು ಚುನಾವಣಾ ಪ್ರಚಾರವನ್ನು ರದ್ದು ಮಾಡಿರುವುದಾಗಿ ಹೇಳಿದ ಸಿಎಂ ಸಿದ್ಧು ಸಂಜೆ ಮೃತ ಯೋಧನ ಅಂತಿಮ ದರ್ಶನ ಪಡೆದು ಯೋಧನ ಕುಟುಂಬಕ್ಕೆ ಸಾಂತ್ವನ ಹೇಳುವುದಾಗಿ ತಿಳಿಸಿದರು. ಮೈಸೂರು ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಸ್ಥಾನ ಹಿಡಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.