ಮೈಸೂರು: ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ನೇತೃತ್ವದಲ್ಲಿ ಜಿಪಂ-ತಾಪಂ ಚುನಾವಣೆಯಲ್ಲಿ ತೆಗೆದಿಕೊಂಡಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ದಕ್ಷಿಣ ವಲಯ ವ್ಯಾಪ್ತಿಯ ಐದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಮೈಸೂರಿನಲ್ಲಿ ನಡೆಸಲಾಯಿತು.
ಮೈಸೂರಿನ ದಕ್ಷಿಣ ವಲಯ ಐಜಿಪಿ ಕಚೇರಿಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೇತ್ವತ್ವದಲ್ಲಿ ಐಜಿಪಿ ಬಿ.ಕೆ ಸಿಂಗ್, ಮೈಸೂರು ಎಸ್ಪಿ ಅಭಿನವ್ ಖರೆ ಸೇರಿದಂತೆ ಮಂಡ್ಯ ಎಸ್ಪಿ, ಹಾಸನ ಎಸ್ಪಿ, ಚಾಮರಾಜನಗರ ಎಸ್ಪಿ, ಮಡಿಕೇರಿ ಎಸ್ಪಿ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಇದೇ ತಿಂಗಳು 20 ರಂದು ನಡೆಯಲಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ ಹಾಗೂ ಮುನ್ನೆಚ್ಚರಿಕ ಕ್ರಮವಾಗಿ ಕೈಗೊಳ್ಳಬೇಕಾದ ಭದ್ರತೆ ಬಗ್ಗೆ ಚರ್ಚಿಸಲಾಯಿತು.