ಮೈಸೂರು: ಸಿಎಂ ಸಿದ್ಧರಾಮಯ್ಯನವರು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ರಾಜ್ಯ ಚುನಾವಣಾ ಅಯೋಗ ವರದಿ ಕೇಳಿದ್ರೆ ತನಿಖೆ ಮಾಡಿ ರಾಜ್ಯ ಚುನಾವಣಾ ಅಯೋಗಕ್ಕೆ ವರದಿ ನೀಡಲು ಸಿದ್ಧವಾಗಿರುವುದಾಗಿ ಮೈಸೂರು ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಸಿ. ಶಿಖಾ ತಿಳಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಮೇ 1 ರಿಂದ ಬಿಪಿಎಲ್ ಕಾರ್ಡುದಾರರಿಗೆ ಸರ್ಕಾರದಿಂದ ಉಚಿತ ಅಕ್ಕಿ ವಿತರಿಸುವುದಾಗಿ ಹೇಳಿ ಮತದಾರರ ಚುನಾವಣಾ ಪ್ರಚಾರ ಭಾಷಣದಲ್ಲಿ ಆಮಿಷವೊಡ್ಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸದಂತೆ ರಾಜ್ಯ ಚುನಾವಣಾ ಅಯೋಗಕ್ಕೆ ದೂರು ನೀಡುತ್ತೇವೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿ ಶಿಖಾ ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ವರದಿ ಕೇಳಿದರೆ ಕೊಡಲು ಜಿಲ್ಲಾಡಳಿತ ಸಿದ್ಧವಿದೆ ಎಂದು ಸಷ್ಟಪಡಿಸಿದರು.
ಇನ್ನೂ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿದ್ದು ಯಾವುದೇ ಅಹಿತಕರ ಘಟನೆ ಆಗದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ 7 ತಾಲೂಕೂ ಕೇಂದ್ರಗಳಿಗೆ ಒಳಪಟ್ಟ ಸ್ಥಳಗಳಲ್ಲಿ ಜಿಲ್ಲಾ ಪಂಚಾಯಿತಿಯ 49 ಕ್ಷೇತ್ರಗಳಿಗೆ 187 ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ 20 ರಂದು ಬೆಳ್ಳಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದ್ದು, ಇದಕ್ಕಾಗಿ 1794 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿಗೆ ಪಿಂಕ್ ಬಣ್ಣದ ಮತಪತ್ರ ಹಾಗೂ ತಾಲೂಕು ಪಂಚಾಯಿತಿಗೆ ಬಿಳಿ ಬಣ್ಣದ ಮತಪತ್ರಗಳನ್ನು ಉಪಯೋಗಿಸುತ್ತಿದ್ದು ಮತದಾನದ ಭಾವಚಿತ್ರ ಇರುವ 22 ದಾಖಲಾತಿಗಳಲ್ಲಿ ಯಾವುದಾದರೊಂದು ಗುರುತಿನ ಚೀಟಿಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ. ಮತಕೇಂದ್ರದೊಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದ್ದು ಮತದಾನ ಮಾಡುವುದನ್ನು ಯಾರು ಚಿತ್ರೀಕರಿಸದಂತೆ ನಿರ್ಬಂಧ ಹೇರಲಾಗಿದೆ ಎಂದು ವಿವರಿಸಿದರು.
ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನ ಮಾಡಲು ಜಿಲ್ಲಾ ಪೊಲೀಸ್ ಸೂಕ್ತ ಬಂದೋಬಸ್ತ್ ಮಾಡಿದ್ದು 3 ಸಾವಿರ ಪೇದೆಗಳನ್ನು 55 ಡಿವೈಎಸ್ಪಿ ದರ್ಜೆ ಅಧಿಕಾರಿಗಳನ್ನು ನೇಮಿಸಲಾಗಿದ್ದು ಗಸ್ತು ತಿರುಗಲು ಮೊಬೈಲ್ ಪೆಟ್ರೋಲಿಯನ್ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ 331 ಅತಿಸೂಕ್ಷ್ಮ 501 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದ್ದು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ನಿನ್ನೆಯಿಂದ ಹೆಚ್ಚು ದಾಖಲಾಗುತ್ತಿವೆ ಎಂದರು.