News Kannada
Tuesday, July 05 2022

ಮೈಸೂರು

ಭೀಕರ ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು - 1 min read

Photo Credit :

ಭೀಕರ ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಮೈಸೂರು: ನಗರದ ವಿದ್ಯಾವರ್ಧಕ ಶಾಲೆಯಲ್ಲಿ ಹಾಕಿ ಪಂದ್ಯಾವಳಿ ಮುಗಿಸಿಕೊಂಡು ಊರಿಗೆ ಮರಳಿದ್ದ ಆರು ಮಂದಿ ಯುವಕರು ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಗೆ ಸೇರಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ ಬಿಎಂ ಮುಖ್ಯರಸ್ತೆಯಲ್ಲಿ ನಡೆದಿದೆ.


ಇಂದು ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಆಯೋಜಿಸಿದ್ದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ ಮಡಿಕೇರಿ ಮೂಲದ 6 ಮಂದಿ ಪಿರಿಯಾಪಟ್ಟಣದ ಕಡೆಯಿಂದ ಕುಶಾಲನಗರದ ಕಡೆಗೆ ತೆರಳುತ್ತಿದ್ದ ಸಂದರ್ಭಎದುರು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದು,  ಮೂರು ಮಂದಿ ಗಾಯಗೊಂಡು ಪಿರಿಯಾಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಡಿಕೇರಿಯ ವಿವೇಕ(23), ಸುಬ್ಬಯ್ಯ(22), ಪುವ್ವಯ್ಯ(22) ಎಂಬುವವರೇ ಸ್ಥಳದಲ್ಲೇ ಮೃತ ಪಟ್ಟ ದುರ್ದೈವಿಗಳಾಗಿದ್ದು, ಕುಶಾಲನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಮೃತ ಶವವನ್ನು ಕರೆದೊಯ್ಯಲಾಗಿದೆ.  ಗಾಯಗೊಂಡಿರುವ ಜೀವಿಕ(21), ತಿಮ್ಮಯ್ಯ(21), ವಿನಯ್(20) ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದ್ದು ತುರ್ತು ಚಿಕಿತ್ಸಾ ನಿಗಾ ಘಟಕದಲ್ಲಿ ಇರಿಸಲಾಗಿದೆ.

ಈ ಸಂಬಂಧ ಲಾರಿ ಚಾಲಕ ಪರಾರಿಯಾಗಿದ್ದು, ಘಟನೆಯಿಂದ ಸುಮಾರು ಐದು ತಾಸಿಗೂ ಹೆಚ್ಚು ಕಾಲ ಮೈಸೂರು ಮಂಗಳೂರು ಹೆದ್ದಾರಿ ಬಂದ್ ಆಯಿತು. ಘಟನಾ ಸ್ಥಳಕ್ಕೆ ಬೈಲುಕುಪ್ಪೆ ಠಾಣಾ ಪೊಲೀಸರು ಹಾಗೂ ಹುಣಸೂರು ಠಾಣೆಯ ಪೊಲೀಸರು ಮತ್ತು ಪಿರಿಯಾಪಟ್ಟಣ ಠಾಣೆಯ ಪೊಲೀಸರು ಧಾವಿಸಿ ಅಸ್ತವ್ಯಸ್ತವಾಗಿದ್ದ ಸಂಚಾರವನ್ನು ಸರಿಪಡಿಸಲು ಹರಸಾಹಸ ಪಟ್ಟರು. ಪ್ರಕರಣ ದಾಖಲಿಸಿಕೊಂಡಿರುವ ಬೈಲುಕುಪ್ಪೆ ಠಾಣೆಯ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

See also  ಮೈಸೂರು ಬಳಿ ಭೀಕರ ಅಪಘಾತ: ತಾಯಿ ಮಗು ಧಾರುಣ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು