ಮೈಸೂರು: ಕೆಪಿಎಸ್ಸಿ ಪರೀಕ್ಷೆಯಲ್ಲಿ ಅಪರಾಧ ಶಾಸ್ತ್ರ ಮತ್ತು ನ್ಯಾಯವಿಜ್ಞಾನಶಾಸ್ತ್ರವನ್ನು ವಿಭಾಗದ ವಿಧ್ಯಾರ್ಥಿಗಳಿಗೂ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕಣ್ಣಿಗೆ ಕಪ್ಪು ಬಟ್ಟೆ ಧರಿಸಿ ವಿನೂತನ ರೀತಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದರು.
ಅಪರಾಧಶಾಸ್ತ್ರ ಮತ್ತು ನ್ಯಾಯ ವಿಜ್ಞಾನ ಶಾಸ್ತ್ರದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕೆಪಿಎಸ್ಸಿಯಲ್ಲಿ ನಮ್ಮನ್ನು ಪರಿಗಣಿಸುವಂತೆ ಆಗ್ರಹಿಸಿದರು. ಅಲ್ಲದೆ ಪೊಲೀಸ್ ಇಲಾಖೆ ಸೇರಿದಂತೆ ಇತರ ಪರೀಕ್ಷೆಗಳಲ್ಲಿಯೂ ನಮಗೆ ಮೀಸಲಾತಿ ನೀಡುವಂತೆ ಒತ್ತಾಯಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಈ ವಿಭಾಗದ ವಿದ್ಯಾರ್ಥಿಗಳು ಈ ಸಂಬಂಧ ಪ್ರತಿಭಟನೆ ನಡೆಸಿ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ವಿನೂತನ ರೀತಿ ಪ್ರತಿಭಟನೆ ನಡೆಸಿ ನಮಗೆ ನ್ಯಾಯದೊರಕಿಸಿ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.