News Kannada
Wednesday, October 05 2022

ಮೈಸೂರು

2018 ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧೆ: ಶಾಸಕ ನಡಹಳ್ಳಿ ಘೋಷಣೆ - 1 min read

Photo Credit :

2018 ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧೆ: ಶಾಸಕ ನಡಹಳ್ಳಿ ಘೋಷಣೆ

ಮೈಸೂರು: 2018 ರ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ದೇವರ ಹಿಪ್ಪರಗಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಘೋಷಣೆ ಮಾಡಿದ್ದಾರೆ.

ಮೈಸೂರು ನಗರ ಹೊರ ಹೊಲಯದ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಹಠಾತ್ ಗೆ ಕಾಣಿಸಿಕೊಂಡ ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ದೇವರ ಹಿಪ್ಪರಗಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಸಭೆ ಬಳಿಕ ಮಾಧ್ಯಮದವರ ಜತೆ ಮಾತನಾಡಿ, ಕಳೆದ ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ನಮ್ಮ ಕ್ಷೇತ್ರದ ಕಾರ್ಯಕರ್ತರಿಗೆ ಭಿಫಾರಂ ನೀಡಿ ಗೆಲುವಿಗೆ ಕಾರಣರಾದ ಕುಮಾರಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಲು ಆಗಮಿಸಿದ್ದೇನೆ ಎಂದರು.

ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ರೈತರ ಸಮಸ್ಯೆಗಳ ಬಗ್ಗೆ ಗಮನ ಕೊಡುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಬರದಿಂದ ಕುಡಿಯುವ ನೀರಿಗೂ ಹಾಹಾಕಾರವಿದೆ. ಇಂತಹ ಸಂದರ್ಭದಲ್ಲಿ ಎರಡು ಪಕ್ಷಗಳು ರಾಜಕೀಯ ದೊಂಬರಾಟ ಆಡುತ್ತಿವೆ. ಆದ್ದರಿಂದ 2018 ವಿಧಾನ ಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಕುಮಾರಸ್ವಾಮಿ ಮತ್ತೆ  ಮುಖ್ಯಮಂತ್ರಿಯಾಲಿದ್ದಾರೆಂದು ಸ್ಪಷ್ಟಪಡಿಸಿದರು.
8 ಮಂದಿ ಶಾಸಕರೂ ಜೆಡಿಎಸ್ ನತ್ತ
ಮುಂದಿನ ಚುನಾವಣೆಯ ಹೊತ್ತಿಗೆ 8 ಕ್ಕೂ ಹೆಚ್ಚು ಹಾಲಿ ಶಾಸಕರು ಜೆಡಿಎಸ್ ಸೇರಲಿದ್ದು, ಈ ಬಗ್ಗೆ ಈಗಾಗಲೇ ಮಾತುಕತೆ ನಡೆದಿದ್ದು ಚುನಾವಣೆ ಸಂದರ್ಭಕ್ಕೆ ಇವರೆಲ್ಲಾ ಜೆಡಿಎಸ್ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

See also  ಕಬ್ಬಿನ ಗದ್ದೆಯಲ್ಲಿ ಹೆಬ್ಬಾವು ಪ್ರತ್ಯಕ್ಷ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು