News Kannada
Wednesday, October 05 2022

ಮೈಸೂರು

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮೈಸೂರಿನ ಇಬ್ಬರ ವಶ - 1 min read

Photo Credit :

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮೈಸೂರಿನ ಇಬ್ಬರ ವಶ

ಮೈಸೂರು: ದ್ವೀತಿಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಮೈಸೂರಿನ ಇಬ್ಬರು ಪಿಎಚ್ ಡಿ ಪದವೀಧರರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದರೆ, ಸೋರಿಕೆಯಲ್ಲಿ ಮೈಸೂರಿನ ಪ್ರಭಾವಿ ರಾಜಕಾರಣಿಯೊಬ್ಬರು ಭಾಗಿಯಾಗಿರುವ ಶಂಕೆ ಸಹ ವ್ಯಕ್ತವಾಗಿದೆ.

ಮೈಸೂರಿನ ಶಾರದದೇವಿ ನಗರದ  ತಿಮ್ಮೇಗೌಡ ಮತ್ತು ಕುವೆಂಪುನಗರದ ನಾಗೇಂದ್ರ ಸಿಐಡಿ ವಶಕ್ಕೆ ಪಡೆದಿರುವ ಪಿಎಚ್ಡಿ ಪದವೀಧರರಾಗಿದ್ದು, ಇವರು ಹಲವು ವರ್ಷಗಳಿಂದ ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್ಪಿನ್ ಶಿವಕುಮಾರ್ ಜತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದ್ದು, ಇವರು ಮೈಸೂರಿನ ಪ್ರತಿಷ್ಠಿತ ಟ್ಯೂಷನ್ ಸೆಂಟರ್ ಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಪ್ರತಿವರ್ಷ ಸರಬರಾಜು ಮಾಡುತ್ತಿದ್ದರು ಎನ್ನಲಾಗಿದೆ.

ಪಿಯು ಪ್ರಶ್ನೆ ಪತ್ರಿಕೆ ಲೀಕ್ ಔಟ್ ನ ಕಿಂಗ್ ಶಿವಕುಮಾರ್ ಸ್ವಾಮಿ ಜತೆಗೆ ಕಳೆದ ಹಲವು ವರ್ಷಗಳಿಂದ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಶಿವಕುಮಾರಸ್ವಾಮಿಯವರ ಮೊಬೈಲ್ ಕಾಲ್ ಡಿಟೇಲ್ಸ್ ನಲ್ಲಿ ಇವರಿಬ್ಬರೂ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದ್ದು, ಕಳೆದ ಹಲವು ವರ್ಷಗಳಿಂದ ಪ್ರಶ್ನೆ ಪತ್ರಿಕೆ ಲೀಕ್ ಔಟ್ ನಲ್ಲಿಲ್ಲಿ ಇವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಈ ಹಿನ್ನಲೆಯಲ್ಲಿ ಏ.25 ರವರೆಗೂ ಇವರನ್ನು ವಶಕ್ಕೆ ಪಡೆದಿರುವ ಸಿಐಡಿ ಪೊಲೀಸರು ಇನ್ನೂ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಪಿಎಚ್ ಡಿ ಪದವೀಧರರಾಗಿರುವ ನಾಗೇಂದ್ರ ಬೆಂಗಳೂರಿನ ನಾಗರಭಾವಿಯಲ್ಲಿ ಇಂಟಲ್ಯಾಕ್ಚುಯಲ್ ಕರೆಸ್ಪಾಂಡಿಂಗ್ ಕೋಚಿಂಗ್ ಸೆಂಟರ್ ನಡೆಸುತ್ತಿದ್ದು ಇಲ್ಲಿಗೆ ಬರುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿ ಹಣ ಸಂಪಾದಿಸಿರುವ ಆರೋಪವಿದೆ. ಹಣದಾಸೆಗೆ ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮೈಸೂರಿನ ಪ್ರಭಾವಿ ರಾಜಕಾರಣಿಯೊಬ್ಬರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ಕೈಗೊಂಡಿರುವ ಸಿಐಡಿ ಪೊಲೀಸರು ಇನ್ನು ಎರಡು ಮೂರು ದಿನಗಳಲ್ಲಿ ರಾಜಕಾರಣಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

See also  ರಸ್ತೆಯಲ್ಲೇ ಹೊತ್ತಿ ಉರಿದ ಕಾರು: ತಪ್ಪಿದ ಅನಾಹುತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು