News Kannada
Monday, October 03 2022

ಮೈಸೂರು

ಸರ್ಕಾರಿ ಜಾಗ ಒತ್ತುವರಿ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಒತ್ತುವರಿದಾರ - 1 min read

Photo Credit :

ಸರ್ಕಾರಿ ಜಾಗ ಒತ್ತುವರಿ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಒತ್ತುವರಿದಾರ

ಮೈಸೂರು: ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡ ಆರೋಪದ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಒತ್ತುವರಿ ತೆರವು ಮಾಡಲು ನಗರ ಪಾಲಿಕೆ ಅಧಿಕಾರಿಗಳು ಮುಂದಾಗುತ್ತಿದ್ದಂತೆ ಒತ್ತುವರಿದಾರ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಹೈಡ್ರಾಮವಾಡಿದ ಘಟನೆ ಇಂದು(ಶುಕ್ರವಾರ) ಮೈಸೂರಿನಲ್ಲಿ ನಡೆದಿದೆ.

ನಗರದ ಅಗ್ರಹಾರದ ಉತ್ತರಾಧಿಮಠದ ಬಳಿ , ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡು, ಆ ಸ್ಥಳದಲ್ಲಿ ವಾಹನ ಪಾರ್ಕಿಂಗ್ ವಸೂಲಿ ಆರೋಪ ಕೇಳಿ ಬಂದಿದ್ದರಿಂದ,  ತೆರವಿಗಾಗಿ  ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಹೋದಾಗ ಒತ್ತುವರಿದಾರ ಮಹೇಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿ, ಆತಂಕದೊಂದಿಗೆ ಅವಾಂತರ ಸೃಷ್ಠಿಮಾಡಿದ್ದಾನೆ.  ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮೇಯರ್ ಬಿ.ಎಲ್.ಭೈರಪ್ಪ  ಪರಿಶೀಲನೆ ನಡೆಸಿ, ಸ್ಥಳವನ್ನು ನಗರ ಪಾಲಿಕೆಗೆ ತೆಗೆದುಕೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹೇಶ್ಅನ್ನು ವಶಕ್ಕೆ ಪಡೆದಿರುವ ಕೆ.ಆರ್. ಠಾಣಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

See also  ಅರಮನೆಯಲ್ಲಿ ದಸರಾ ಗಜಪಡೆಗಳಿಗೆ ಭವ್ಯ ಸ್ವಾಗತ: ಇನ್ಮುಂದೆ ದಸರಾ ಮೆರಗು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು