News Kannada
Friday, September 30 2022

ಮೈಸೂರು

ಡಿಸಿ ಪ್ರಕರಣ ತನಿಖೆ ಚುರುಕುಗೊಳಿಸಿದ್ದೇವೆ: ಪೊಲೀಸ್ ಕಮಿಷನರ್ - 1 min read

Photo Credit :

ಡಿಸಿ ಪ್ರಕರಣ ತನಿಖೆ ಚುರುಕುಗೊಳಿಸಿದ್ದೇವೆ: ಪೊಲೀಸ್ ಕಮಿಷನರ್

ಮೈಸೂರು: ಡಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದೇವೆ ಯಾವುದೇ ರಾಜಕೀಯ ಒತ್ತಡವಿಲ್ಲ ಎಂದು ಮೈಸೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಸ್ಪಷ್ಟ ಪಡಿಸಿದ್ದಾರೆ.

ಮೈಸೂರು ಜಿಲ್ಲಾಧಿಕಾರಿಗಳಿಗೆ ಸಿಎಂ ಪರಮಾಪ್ತ ಕೆ.ಮರಿಗೌಡ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ದೂರು ದಾಖಲಾಗಿ 11 ದಿನಗಳೆ ಕಳೆದರೂ ಆರೋಪಿಯನ್ನು  ಬಂಧಿಸದೆ ಇರುವ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಮ್ಮ ಕಛೇರಿಯಲ್ಲಿ ತನಿಖೆ ಚುರುಕುಗೊಳಿಸಿದ್ದೇವೆ ಈ ಸಂಬಂಧ ಆರೋಪಿಗಳು ಬಳಸಿದ ಕಾರನ್ನು ವಶಕ್ಕೆ ಪಡೆದಿದ್ದು ಆ ಸಂದರ್ಭದಲ್ಲಿ ಬಳಸಲಾಗಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದು ನಿರೀಕ್ಷಿಣಾ ಜಾಮೀನು ಅರ್ಜಿ ತಿರಸ್ಕಾರಗೊಂಡ ಹಿನ್ನಲ್ಲೆಯಲ್ಲಿ ತನಿಖೆಯನ್ನ ಚುರುಕುಗೊಳಿಸಿದ್ದು ಈಗಾಗಲೇ ಕೆಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗಿದೆ ಎಂದರು.

ಮರಿಗೌಡ ಅವರನ್ನು ಬಂಧಿಸದಂತೆ ಯಾವುದಾದರೂ ರಾಜಕೀಯ ಒತ್ತಡವಿದೆಯೇ ಎಂಬ ಪ್ರಶ್ನೆಗೆ ಯಾವುದೇ ರಾಜಕೀಯ ಒತ್ತಡವಿಲ್ಲ ಆರೋಪಿಯನ್ನು ಶೀಘ್ರ ಬಂಧಿಸುತ್ತೇವೆ, ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಹೆಚ್ಚೇನು ಹೇಳುವುದಿಲ್ಲ ಎಂದು ತಿಳಿಸಿದರು.

See also  ದಸರಾಗೆ ತರಾತುರಿ ಕಳಪೆ ಕಾಮಾಗಾರಿ... ಬಿಜೆಪಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು