News Kannada
Saturday, October 01 2022

ಮೈಸೂರು

ವಕೀಲರಿಂದ ಪ್ರತಿಭಟನೆ: ಮೈಸೂರು ನ್ಯಾಯಾಲಯಕ್ಕೆ ಬಿಗಿ ಭದ್ರತೆ - 1 min read

Photo Credit :

ವಕೀಲರಿಂದ ಪ್ರತಿಭಟನೆ: ಮೈಸೂರು ನ್ಯಾಯಾಲಯಕ್ಕೆ ಬಿಗಿ ಭದ್ರತೆ

ಮೈಸೂರು: ಸ್ಫೋಟ ಸಂಭವಿಸಿರುವುದನ್ನು ಖಂಡಿಸಿ ಹಾಗೂ ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ವಕೀಲರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.

ನ್ಯಾಯಾಲಯದ ಮುಂದಿನ ಮಹಾತ್ಮ ಗಾಂಧಿ ಪ್ರತಿಮೆ ಸುತ್ತ ಮಾನವ ಸರಪಳಿ ರಚಿಸಿದ ಜಿಲ್ಲಾ ವಕೀಲರ ಸಂಘದ ಸದಸ್ಯರು ನ್ಯಾಯಾಲಯಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಸಂಘದ ಅಧ್ಯಕ್ಷ ಚಂದ್ರಮೌಳಿ, ಉಪಾಧ್ಯಕ್ಷ ಚಂದ್ರಶೇಖರ್, ಪದಾಧಿಕಾರಿಗಳಾದ ಜೀವನ್, ಶ್ರೀಕೃಷ್ಣ, ಸನತ್, ದಿನೇಶ್ ಗೌಡ ಹಾಗೂ ಇತರರು ಭಾಗವಹಿಸಿದ್ದರು. ಈ ಮಧ್ಯೆ ಜಿಲ್ಲಾ ವಕೀಲರ ಸಂಘಕ್ಕೆ ಸಾರ್ವಜನಿಕರಿಗೆ ಪ್ರವೇಶ ನೀಡದಿರಲು ಸಂಘ ನಿರ್ಧರಿಸಿದೆ.

ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ: ಬೆಂಗಳೂರಿನಿಂದ ಬೆಳಿಗ್ಗೆಯೇ ಬಂದ ಬಾಂಬ್ ನಿಷ್ಕ್ರಿಯ ದಳವು ಸ್ಫೋಟ ಸಂಭವಿಸಿದ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸಿತು. ಸ್ಥಳದಲ್ಲಿ ಸಿಕ್ಕ ವಸ್ತುಗಳನ್ನು ಹೆಚ್ಚಿನ ಅಧ್ಯಯನಕ್ಕೆ ಸದಸ್ಯರು ತೆಗೆದುಕೊಂಡರು. ಸ್ಫೋಟ ಸಂಭವಿಸಿದ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೂ ಮೊಕ್ಕಾಂ ಹೂಡಿದ್ದು, ಇನ್ನಷ್ಟು ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯಾಯಾಲಯದ ಆವರಣದಲ್ಲಿ ಬಿಗಿಭದ್ರತೆ ಕಲ್ಪಿಸಲಾಗಿದ್ದು, ಆವರಣದ ಗೇಟ್ ಬಳಿ ಲೋಹಶೋಧಕ ಯಂತ್ರವನ್ನು ಅಳವಡಿಸಲಾಗಿದೆ. ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ. ಈ ಸ್ಫೋಟ ಇತರೆ ಭಾಗಗಳಲ್ಲಿ ನಡೆದಿರುವ ಸ್ಫೋಟಕ್ಕೆ ಸಾಮ್ಯತೆ ಇದಯೇ ಎಂಬುದರ ಬಗ್ಗೆ ಪೊಲೀಸರು ಹಾಗೂ ಬಾಂಬ್ ಪತ್ತೆ ದಳ ಕಾರ್ಯಚರಣೆ ಕೈಗೊಂಡಿವೆ. ನ್ಯಾಯಾಲಯದ ಆವರಣದ ಶೌಚಾಲಯದಲ್ಲಿ ನಡೆಸಿರುವ ಸ್ಫೋಟಕ್ಕೆ ಬಳಸಿರುವ ಕೆಲವು ವಸ್ತುಗಳನ್ನ ವಶಕ್ಕೆ ಪಡೆದಿದ್ದು, ತನಿಖೆ ಚುರುಕುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು, ಮೈಸೂರು ಆರಮನೆ,ರೈಲ್ವೆ ನಿಲ್ದಾಣ, ನಗರ ಬಸ್ ನಿಲ್ದಾಣಗಳಲ್ಲಿ ತಪಾಸಣೆ ಕೈಗೊಳ್ಳಲಾಗಿದೆ.

See also  ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಅರಿವಿರಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು