News Kannada
Thursday, September 29 2022

ಮೈಸೂರು

ಕಾವೇರಿ ನೀರು ಹಂಚಿಕೆ ತೀರ್ಪು ವಿರೋಧಿಸಿ ಮುಂದುವರಿದ ಹೋರಾಟ - 1 min read

Photo Credit :

 ಕಾವೇರಿ ನೀರು ಹಂಚಿಕೆ ತೀರ್ಪು ವಿರೋಧಿಸಿ ಮುಂದುವರಿದ ಹೋರಾಟ

ಮೈಸೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕ್ರಮವನ್ನು ವಿರೋಧಿಸಿ 5ನೇ ದಿನವಾದ ಶನಿವಾರವೂ ಕೂಡ ನಗರದಲ್ಲಿ ಹೋರಾಟಗಳು ನಡೆದವು.

ತಮಿಳು ವಾಣಿಯಾರ್ ಸಂಘ: ನಗರದ ಕೆ.ಆರ್.ಮೊಹಲ್ಲಾದರಲ್ಲಿರುವ ಫ್ರೀಡಂ ಪಾರ್ಕ್ ನಲ್ಲಿ ಜಮಾಯಿಸಿದ್ದ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಮೌನ ಮೆರವಣಿಗೆ ಮೂಲಕ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಆಗಮಿಸಿ, ಪ್ರತಿಭಟನೆ ನಡೆಸಿದರು. ಇದೇ ವೇಳೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕರ್ನಾಟಕದಲ್ಲಿಯೇ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಿರುವಾಗ ತಮಿಳುನಾಡಿಗೆ ಬೆಳೆಗೆಂದು ನೀರು ಬಿಡುತ್ತಿರುವ ಕ್ರಮ ಸರಿಯಲ್ಲ, ಕೂಡಲೇ ಕಾವೇರಿ ನೀರು ಬಿಡುತ್ತಿರುವುದನ್ನು ನಿಲ್ಲಿಸಬೇಕು, ಕಾವೇರಿ ಕಣಿವೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರು ಉಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕನ್ನಡ ನಾಡಿನ ನೆಲದಲ್ಲಿ ವಾಸಿಸುತ್ತಿರುವ ನಾವೆಲ್ಲಾ ಸಹೋದರರಾಗಿದ್ದು, ಕಾವೇರಿ ನೀರಿಗಾಗಿ ಕರ್ನಾಟಕದ ಜನರು ನಡೆಸುವ ಎಲ್ಲಾ ಹೋರಾಟಗಳಿಗೆ ನಮ್ಮ ಬೆಂಬಲವಿರುವುದಾಗಿ ತಿಳಿಸಿದರು. ಪ್ರತಿಭಟನೆಯ ನೇತೃತ್ವವನ್ನು ಸಂಘದ ಅಧ್ಯಕ್ಷ ವಜ್ರವೇಲು ವಹಿಸಿದ್ದರು. ಉಪಾಧ್ಯಕ್ಷ ತಿರುಮಲೈ, ಕಾರ್ಯದರ್ಶಿ ಶ್ರೀನಿವಾಸ್, ಜಂಟಿ ಕಾರ್ಯದರ್ಶಿ ಮೋಹನಸುಂದರಂ, ಖಜಾಂಚಿ ಮುರುಗೇಶ್ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.

See also  ಇದು ನನ್ನ ಕೊನೆಯ ಚುನಾವಣೆ, ಚಾ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ: ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು