News Kannada
Sunday, October 02 2022

ಮೈಸೂರು

ದಸರಾ ಚಲನಚಿತ್ರೋತ್ಸವ: ರಾಜ್ಯ-ರಾಷ್ಟ್ರ ಪ್ರಶಸ್ತಿ-ಪುರಸ್ಕಾರ ಪಡೆದ ಚಲನಚಿತ್ರಗಳ ಪ್ರದರ್ಶನ - 1 min read

Photo Credit :

 ದಸರಾ ಚಲನಚಿತ್ರೋತ್ಸವ: ರಾಜ್ಯ-ರಾಷ್ಟ್ರ ಪ್ರಶಸ್ತಿ-ಪುರಸ್ಕಾರ ಪಡೆದ ಚಲನಚಿತ್ರಗಳ ಪ್ರದರ್ಶನ

ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ದಸರಾ ಚಲನಚಿತ್ರೋತ್ಸವ ಸಹ ಪ್ರಮುಖ ಆಕರ್ಷಣೆಯಾಗಿದ್ದು,ಪ್ರತಿ ವರ್ಷದಂತೆ ಈ ವರ್ಷವು ಸಹ ಕನ್ನಡದ ಜನಪ್ರಿಯ ಚಲನಚಿತ್ರಗಳು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ-ಪುರಸ್ಕಾರ ಪಡೆದ ಚಲನಚಿತ್ರಗಳ ಜೊತೆಗೆ ದೇಶ-ವಿದೇಶಗಳ ಅತ್ಯುತ್ತಮ ಹಾಗೂ ಜಾಗತಿಕ ಮನ್ನಣೆ ಪಡೆದ ಸಿನಿಮಾಗಳನ್ನು ದಸರಾ ಚಲನಚಿತ್ರೋತ್ಸವ -2016ರಲ್ಲಿ ಪ್ರದರ್ಶಿಸಲಾಗುತ್ತಿದೆ.

ಕನ್ನಡದ ಇತ್ತೀಚಿನ ಜನಪ್ರಿಯ, ಪ್ರಶಸ್ತಿ ವಿಜೇತ ಉತ್ತಮ  ಚಿತ್ರಗಳು, ಪ್ರಾದೇಶಿಕ ಭಾಷೆಗಳ ಉತ್ತಮ ಚಿತ್ರಗಳು ಹಾಗೂ ವಿಶ್ವಮಟ್ಟದಲ್ಲಿ ಮಾನ್ಯತೆ ಪಡೆದ ಚಿತ್ರಗಳು ಅಕ್ಟೋಬರ್ 1 ರಿಂದ  ಅಕ್ಟೋಬರ್ 8 ರವರೆಗೆ ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ದಿನಗಳಂದು ಪ್ರದರ್ಶನಗೊಳ್ಳಲಿವೆ. 

ದಸರಾ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 1 ರಂದು ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ. ಈ ವರ್ಷದ ದಸರಾ ಮಹೋತ್ಸವವನ್ನು ನೀರಿನ ಸಂರಕ್ಷಣೆ ಧ್ಯೇಯದೊಂದಿಗೆ ಆಚರಿಸಲಾಗುತ್ತಿದ್ದು, ಉದ್ಘಾಟನಾ ಸಮಾರಂಭದ ನಂತರ ನೀರಿನ ಸಂರಕ್ಷಣೆ ಕುರಿತು ಭಾರತ ಸರ್ಕಾರದ ಚಲನಚಿತ್ರ ವಿಭಾಗದ ವತಿಯಿಂದ ನಿರ್ಮಿಸಿರುವ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರೋತ್ಸವವನ್ನು ಉದ್ಘಾಟಿಸುವರು. ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವಾಸು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಹಕಾರ ಸಚಿವರಾದ ಹೆಚ್.ಎಸ್. ಮಹದೇವ ಪ್ರಸಾದ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವರಾದ ತನ್ವೀರ್ ಸೇಠ್, ಸೇರಿದಂತೆ ಮೈಸೂರು ಜಿಲ್ಲೆಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸತ್ ಸದಸ್ಯರು  ಮತ್ತಿತರ  ಜನಪ್ರತಿನಿಧಿಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಕನ್ನಡ ಚಿತ್ರರಂಗದ ಗಣ್ಯರು ಸಹ ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಕನ್ನಡದ ಹಿರಿಯ ಚಲನಚಿತ್ರ ನಿರ್ದೇಶಕರಾದ ಎಸ್.ಕೆ. ಭಗವಾನ್  ದೊರೈ-ಭಗವಾನ್ ಜೋಡಿ ಕನ್ನಡ ಚಿತ್ರ ರಂಗಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ), ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಟಿ.ಎಸ್.ನಾಗಾಭರಣ್, ಪವನ್ ಕುಮಾರ್, ಕಲಾವಿದರಾದ ಸುಧಾರಾಣಿ, ವಿಜಯ ಸೂರ್ಯ, ಮಯೂರಿ, ಕಾವ್ಯ ಶೆಟ್ಟಿ, ಸೇರಿದಂತೆ ಚಿತ್ರೋದ್ಯಮದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.  

ಚಿತ್ರಮಂದಿರದಲ್ಲಿ ಪ್ರದರ್ಶಿಸಲಾಗುವ ಕನ್ನಡ ಚಲನಚಿತ್ರಗಳ ವಿವರ ಇಂತಿದೆ:

ಕೆಂಡಸಂಪಿಗೆ, ಒಡಿ. & ಒಡಿ  ರಾಮಾಚಾರಿ, ರನ್ನ, ಇಷ್ಟಕಾಮ್ಯ, ಬಬ್ರುವಾಹನ, ಅಪೂರ್ವ, ಜೂಮ್, ವಾಸ್ತುಪ್ರಕಾರ, ಕ್ರಾಂತಿವೀರ ಸಂಗೊಳ್ಳಿರಾಯಣ್ಣ, ದೇವರನಾಡಲ್ಲಿ, ಕಿರಗೂರಿನ ಗಯ್ಯಾಳಿಗಳು, ಗೋಧಿಬಣ್ಣ ಸಾಧಾರಣ ಮೈಕಟ್ಟು, ಯುಟರ್ನ್, ಫಸ್ಟ್ ರ್ಯಾಂಕ್ ರಾಜು, ತಿಥಿ, ಸಂತೆಯಲ್ಲಿ ನಿಂತ ಕಬೀರ, ರಂಗಿತರಂಗ, ಲಾಸ್ಟ್ ಬಸ್, ರಿಕ್ಕಿ, ಪ್ರಿಯಾಂಕ, ನಾನು ನನ್ನ ಕನಸು, ನಾನು ಅವನಲ್ಲ ಅವಳು, ಚಕ್ರವ್ಯೂಹ, ಬುಲ್ ಬುಲ್, ದೃಶ್ಯ, ಉಳಿದವರು ಕಂಡಂತೆ, ಶಿವಲಿಂಗ, ಮಾಣಿಕ್ಯ.

See also  ಮಂಡ್ಯದಲ್ಲಿ ಅಗಲಿದ ಅಂಬರೀಶ್‍ಗೆ ಭಾವಪೂರ್ಣ ಶ್ರದ್ಧಾಂಜಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು