News Kannada
Sunday, September 25 2022

ಮೈಸೂರು

ಮೈಸೂರು ದಸರಾ: ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ - 1 min read

Photo Credit :

ಮೈಸೂರು ದಸರಾ: ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ

ಮೈಸೂರು: ನಾಡಹಬ್ಬ ದಸರಾದ ಸಂದರ್ಭದಲ್ಲಿ ಚಾಮುಂಡಿ ತಾಯಿಗೆ ದರ್ಶನಕ್ಕೆ ಬರುವ ಸಾರ್ವಜನಿಕ ವಾಹನಗಳನ್ನು ಬೆಟ್ಟದ ಮೇಲೆ ಹೋಗದಂತೆ ನಿರ್ಬಂಧಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ದಸರಾ-2016 ನಾಡಹಬ್ಬದ ಸಂದರ್ಭದಲ್ಲಿ ಶ್ರೀಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬರುವ ನಿರೀಕ್ಷೆಯ ಹಿನ್ನಲೆಯಲ್ಲಿ ಚಾಮುಂಡಿಬೆಟ್ಟದ ಮೇಲೆ ವಾಹನಗಳ ನಿಲುಗಡೆಗೆ ಸ್ಥಳಾವಕಾಶದ ಅಭಾವ ಇರುವ ಕಾರಣ ದಿನಾಂಕ: 01/10/2016 ರಿಂದ 16/10/2016ರವರೆಗೆ ಪ್ರತಿ ದಿನ ಬೆಳಿಗ್ಗೆ 06-00 ಗಂಟೆಯಿಂದ  ರಾತ್ರಿ 8-30 ಗಂಟೆವರೆಗೆ ಸಾರ್ವಜನಿಕರ ಖಾಸಗಿ ವಾಹನಗಳನ್ನು ಚಾಮುಂಡಿಬೆಟ್ಟದ ತಾವರೆಕಟ್ಟೆ ಬಳಿಯಿಂದ ಚಾಮುಂಡಿಬೆಟ್ಟಕ್ಕೆ ಸಂಚರಿಸುವುದನ್ನು ನಿರ್ಬಂಧಿಸಲಾಗಿದೆ.

ಜಿಲ್ಲಾಡಳಿತವು ಸಾರ್ವಜನಿಕರಿಗೆ ಲಲಿತಮಹಲ್ ಹೆಲಿಪ್ಯಾಡ್ ಬಳಿಯಿಂದ ಚಾಮುಂಡಿಬೆಟ್ಟಕ್ಕೆ ಉಚಿತ ಸಾರಿಗೆ ಬಸ್ಸುಗಳ ಸೇವೆಯನ್ನು ವ್ಯವಸ್ಥೆಗೊಳಿಸಿರುತ್ತದೆ. ಸಾರ್ವಜನಿಕರು ಬರುವ ವಾಹನಗಳಿಗೆ ಮೈಸೂರು ನಗರದ ಲಲಿತಮಹಲ್ ಹೆಲಿಪ್ಯಾಡ್ ಬಳಿ ಇರುವ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿದ್ದು ಸಾರ್ವಜನಿಕರು ಅವರ ವಾಹನಗಳನ್ನು ಈ ಸ್ಥಳದಲ್ಲಿ ನಿಲ್ಲಿಸಿ ಜಿಲ್ಲಾಡಳಿತ ವತಿಯಿಂದ ವ್ಯವಸ್ಥೆಗೊಳಿಸಿರುವ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಿ ಸುಗಮ ಸಂಚಾರಕ್ಕೆ ಸಹಕರಿಸುವಂತೆ ಕೋರಿದೆ.  

See also  ಶಿಡ್ಲಘಟ್ಟದಲ್ಲಿ ದಾಖಲೆಯಿಲ್ಲದ 13ಲಕ್ಷ ರೂ. ವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು